Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಇಂದು ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ – ಜಿಲ್ಲಾಧಿಕಾರಿ

ಮಂಡ್ಯ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ದಿನಾಂಕ 2/12/2024ರ ಸೋಮವಾರವಾದ ಇಂದು ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ) ರಜೆ ಘೋಷಣೆ ಮಾಡಲಾಗಿದೆ.

ಈ ರಜೆಯು ಮಂಡ್ಯ ಜಿಲ್ಲೆಯ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ಎರಡನೇ ಪಿಯುಸಿ) ವರೆಗೆ ಅನ್ವಯವಾಗುತ್ತದೆ.

ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!