Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಗ್ರಾಪಂ ಸದಸ್ಯರು, ನೌಕರರ ಬೇಡಿಕೆ ಅಧ್ಯಯನಕ್ಕೆ ತಜ್ಞರ ತಂಡ

ಶಾಸಕ ದಿನೇಶ್‌ ಗೂಳಿಗೌಡ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ

ಸಿಎಂ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ್‌ ಖರ್ಗೆಗೆ ಅಭಿನಂದಿಸಿದ ವಿ.ಪ ಸದಸ್ಯ ದಿನೇಶ್‌ ಗೂಳಿಗೌಡ

ಬೆಂಗಳೂರು: ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚಿಸಬೇಕು ಎಂಬ ಶಾಸಕ ದಿನೇಶ್‌ ಗೂಳಿಗೌಡ ಅವರ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಮಂಡಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ.

ಗ್ರಾಪಂ ಸದಸ್ಯರು, ಅಧಿಕಾರಿಗಳ ಸಮಸ್ಯೆಗಳ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಪತ್ರ ಬರೆದಿದ್ದ ಶಾಸಕ ದಿನೇಶ್‌ ಗೂಳಿಗೌಡ ಅವರು, ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದರು. ಅಲ್ಲದೆ, ಬೇಡಿಕೆಗಳ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆಗೆ ಒತ್ತಾಯಿಸಿದ್ದರು. ಈಗ ಈ ಬಗ್ಗೆ ಶಾಸಕರ ಪತ್ರಕ್ಕೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ, ತಜ್ಞರ ಸಮಿತಿ ರಚನೆ ಸಂಬಂಧ ಪರಿಶೀಲಿಸಿ ಪ್ರಸ್ತಾವನೆ ಮಂಡಿಸಲು ಸೂಚಿಸಿದ್ದಾರೆ.

ಪಂಚಾಯಿತಿ ಒಕ್ಕೂಟಗಳ ಪದಾಧಿಕಾರಿಗಳ ಸಭೆ ನಡೆಸಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಸಮಸ್ಯೆಗಳ ಅಧ್ಯಯನ ಹಾಗೂ ಇತ್ಯರ್ಥಕ್ಕೆ ತಜ್ಞರ ತಂಡವನ್ನು ರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ನೌಕರರ ಪರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಾಗೂ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ವಿ.ಪ ಸದಸ್ಯ ದಿನೇಶ್‌ ಗೂಳಿಗೌಡ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!