
ಮಂಡ್ಯ ನಗರದ ಹೊಸಹಳ್ಳಿ ಬಡಾವಣೆಯಲ್ಲಿ ಗುಂಡಿ ಬಿದ್ದಿರುವ ರಸ್ತೆಯನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ಸರ್ ಎಂ ವಿಶ್ವೇಶ್ವರಯ್ಯ ಗೆಳೆಯರ ಬಳಗದಿಂದ ಹೊಸಹಳ್ಳಿ ಮತ್ತು ರಾಮನಹಳ್ಳಿ ಗ್ರಾಮಸ್ಥರು ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ಪ್ರತಿಭಟನೆ ನಡೆಸಿದರು. ಸಂಘದ ಅಧ್ಯಕ್ಷ ಹೊಸಳ್ಳಿ ಶಿವು ಮಾತನಾಡಿ ಈ ರಸ್ತೆಯಲ್ಲಿ ಮಳವಳ್ಳಿ ಹಲಗೂರು ಕೊಳ್ಳೇಗಾಲ ಮಾದೇಶ್ವರನ ಬೆಟ್ಟ ನರಸೀಪುರ ಸೇರಿದಂತೆ ವಿವಿಧ ಭಾಗಗಳಿಗೆ ನೂರಾರು ಜನರು ಪ್ರತಿ ದಿನ ತೆರಳುತ್ತಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕರು ರಸ್ತೆಯಲ್ಲಿ ತಿರುಗಾಡಲು ವಾಹನಗಳ ಸಂಚಾರಕ್ಕೂ ತೊಂದರೆಯಾಗುತ್ತಿದೆ. ರಸ್ತೆ ಗುಂಡಿ ಬಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರೂ ಸಹ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಜಿಲ್ಲಾಡಳಿತ, ನಗರಸಭೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ದುರಸ್ತಿ ಮಾಡಿಸದೆ ನಿರ್ಲಕ್ಷ ವಹಿಸಿದ್ದಾರೆ ಎಂದರು. ಪ್ರತಿಭಟನೆಯಲ್ಲಿ ಮಹಾಂತಪ್ಪ, ಮಾದರಾಜೆ ಅರಸು, ಪ್ರಸನ್ನ, ಶಿವಕುಮಾರ್, ಮಧು, ನಾಗಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

Leave a Reply