
ಕೃಷಿ ಇಲಾಖೆಯ ವಿವಿಧ ಕೆಲಸಗಳ ನಿರ್ವಹಣೆಗಾಗಿ ಮಂಡ್ಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ 2 ಕೋಟಿ ರೂ ವೆಚ್ಚದ ಸೆಂಟರ್ ಆಫ್ ಎಕ್ಸಲೆಂನ್ಸ್ ಕಚೇರಿ ಪ್ರಾರಂಭಿಸಲು ಶಂಕುಸ್ಥಾಪನೆಯನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ನೆರವೇರಿಸಿದರು.
ಜಿಲ್ಲೆಯಲ್ಲಿ ಸರ್ಕಾರಿ ಕಟ್ಟಡವಿಲ್ಲದೆ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರೈತ ಸಂಪರ್ಕ ಕೇಂದ್ರಗಳಿಗೆ ಸರ್ಕಾರಿ ಕಟ್ಟಡ ನಿರ್ಮಿಸಲು ಸರ್ಕಾರ ಅನುದಾನವನ್ನು ಒದಗಿಸಲಿದೆ ಎಂದರು.
ಜಿಲ್ಲೆಯ 7 ತಾಲ್ಲೂಕುಗಳಲ್ಲಿಯೂ ಕೃಷಿ ನಿರ್ದೇಶಕರ ಕಚೇರಿಯನ್ನು ನಿರ್ಮಿಸುವುದು ನಮ್ಮ ಉದ್ದೇಶವಾಗಿದ್ದು, ಆಯಾ ಕ್ಷೇತ್ರದ ಶಾಸಕರುಗಳು ಸ್ಥಳವನ್ನು ಹುಡುಕಿ ನಿಗಧಿಪಡಿಸಬೇಕು. ತಹಶಿಲ್ದಾರರು ಹಾಗೂ ಕೃಷಿ ಇಲಾಖೆಯವರು ಪರಸ್ಪರ ಸಹಕಾರದೊಂದಿಗೆ ಕಚೇರಿ ನಿರ್ಮಿಸಲು ಸ್ಥಳ ಗುರುತಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ ರವಿಕುಮಾರ್, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ ಅಶೋಕ್, ಸಹಾಯಕ ಕೃಷಿ ನಿರ್ದೇಶಕಿ ಸುನೀತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply