Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಬೇಸಿಗೆ ಶಿಬಿರದಲ್ಲಿ ಚಿಣ್ಣರಿಗಾಗಿ ಗ್ರಾಮೀಣ ಆಟಗಳ ಪರಿಚಯ

ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ  ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಮಂಡ್ಯ ಹಾಗೂ  ಹನಕೆರೆ ಗ್ರಾಮ ಪಂಚಾಯಿತಿ ಕಾರ್ಯಲಯ ಮತ್ತು ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಇವರ ವತಿಯಿಂದ ನಡೆಯುತ್ತಿರುವ ಬೇಸಿಗೆ ಶಿಬಿರದಲ್ಲಿ ಚಿಣ್ಣರು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಗ್ರಾಮೀಣ ಆಟಗಳಾದ ಲಗೋರಿ, ಬ್ಯಾಡ್ಮಿಂಟನ್, ರಿಂಗ್‌ಥ್ರೋ ಸೇರಿದಂತೆ ಹಲವು ಆಟೋಟಗಳಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು.
ರೈತ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಚ್.ಡಿ. ಕೃಷ್ಣ ಮಾತನಾಡಿ, ಶಿಬಿರದಲ್ಲಿ ಪಾಲ್ಗೊಂಡಿರುವ ಮಕ್ಕಳಿಗೆ ಪ್ರತಿ ದಿನ ವಿವಿಧ ಬಗೆಯ ಆಟೋಟ ಸ್ಪರ್ಧೆಗಳು ಸೇರಿದಂತೆ ವಿವಿಧ ಕಲಿಕಾ ಚಟುವಟಿಕೆಗಳನ್ನು ಮಾಡಲಾಗುತ್ತಿದೆ ಎಂದರು.
ಬೇಸಿಗೆ ಸಮಯದಲ್ಲಿ ಶಾಲೆಗಳಿಗೆ ರಜೆ ಇರುವ ಕಾರಣ ಎಲ್ಲರೂ ಬಿಸಿಲಿನಲ್ಲಿ ಸುತ್ತುತ್ತಾ ಕಾಲ ಕಳೆಯುತ್ತಾರೆ. ಪಾಠ ಪ್ರವಚನಗಳನ್ನು ಮರೆಯುತ್ತಾರೆ. ಮುಂದಿನ ತರಗತಿಗೆ ಹೋಗಬೇಕಿದ್ದರೂ, ಅದಕ್ಕೆ ಹೆಚ್ಚಿನ ತಲೆ ಕೆಡಿಸಿಕೊಳ್ಳದಿರುವುದನ್ನು ಕಂಡಿದ್ದವೆ. ಹಾಗಾಗಿ ಮಕ್ಕಳಿಗೆ ಆಟದ ಜೊತೆಗೆ ಪಾಠ ಎಂಬ ವಿಚಾರ ಇಟ್ಟುಕೊಂಡು ಚಿಣ್ಣರ ಬೇಸಿಗೆ ಶಿಬಿರಗಳನ್ನು ಏರ್ಪಡಿಸಿರುವುದು ಮಕ್ಕಳ ದೈಹಿಕ ಸಾಮರ್ಥ್ಯದ ಜೊತೆಗೆ ಮಾನಸಿಕ ಸಾಮರ್ಥ್ಯವನ್ನು ವೃದ್ಧಿ ಮಾಡಲು ಇದು ಸಹಕಾರಿಯಾಗಿದೆ ಎಂದು ಹೇಳಿದರು.
ಜೊತೆಗೆ ಮಕ್ಕಳಿಗೆ ಗ್ರಾಮೀಣ ಆಟಗಳನ್ನು ಪರಿಚಯ ಮಾಡಿಕೊಡುವುದು, ಅದನ್ನು ನಿಯಮಾನುಸಾರ ಆಟವಾಡುವ ಬಗೆ ಹೇಗೆ ಎಂಬ ಬಗ್ಗೆಯೂ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಪಿಡಿಓ ಭಾಗ್ಯ, ಗ್ರಂಥಪಾಲಕ ರಾಜು ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!