
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಮಂಡ್ಯ ತಾಲ್ಲೂಕಿನ ಮಂಗಲ ಗ್ರಾಮ ಪಂಚಾಯತಿ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇ- ಹಾಜರಾತಿ ಕಡ್ಡಾಯಗೊಳಿಸಲಾಗಿದ್ದು, ಹಾಜರಾತಿ ಪರಿಶೀಲಿಸಿದರು.
ಸಿಬ್ಬಂದಿಗಳ ಹಾಜರಾತಿ, ಚಲನವಲನ ವಹಿ, ನಗದು ನಿರ್ವಹಣಾ ವಹಿ, ನರೇಗಾ ದಾಖಲೆಗಳು, ಕುಡಿಯುವ ನೀರಿನ ವ್ಯವಸ್ಥೆ, ಬೇಸಿಗೆ ಶಿಬಿರ ದ ಪ್ರಗತಿ ಹಾಗೂ ಸಾರ್ವಜನಿಕ ದೂರಿಗೆ ಗ್ರಾಮ ಪಂಚಾಯತ್ ಕೈಗೊಂಡ ಕ್ರಮಗಳ ಬಗ್ಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ, ಅಗತ್ಯ ಸಲಹೆಗಳನ್ನು ನೀಡಿದರು.
ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಾರ್ವಜನಿಕರ ಕೆಲಸಗಳನ್ನು ನಿಯಮಾನುಸಾರ ನಿಗದಿತ ಅವಧಿಯೊಳಗೆ ಮಾಡಿಕೊಡುವಂತೆ ಸೂಚನೆ ನೀಡಿದರು.

Leave a Reply