Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಡಿ.ಕೆ ಶಿವಕುಮಾರ್ ಹುಟ್ಟುಹಬ್ಬ ಆಚರಣೆ : ಸಿಹಿ, ಹಣ್ಣು ಹಂಪಲು ವಿತರಣೆ

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ನಗರದಲ್ಲಿ ಕೆಪಿಸಿಸಿ ಸದಸ್ಯ ಹಾಗೂ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಡ್ಯ ಸಂದೀಪ್ ಗೌಡ ನೇತೃತ್ವದಲ್ಲಿ ವಿವಿಧ ಸೇವಾ ಕಾರ್ಯಗಳ ಮೂಲಕ ಸರಳವಾಗಿ,ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಗರದ ಸಂಜಯ ವೃತದಲ್ಲಿ ಜಮಾವಣೆಗೊಂಡ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಮುಖಂಡರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕೆಕ್ ಕತ್ತರಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು. ಬಳಿಕ ಜಿಲ್ಲಾ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ನಂತರ ಮಾತನಾಡಿದ ಕೆಪಿಸಿಸಿ ಸದಸ್ಯ ಹಾಡ್ಯ ಸಂದೀಪ್ ಗೌಡ, ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರವಹಿಸಿ ರಾಜ್ಯದಲ್ಲಿ ಸರ್ಕಾರವನ್ನು ಅಧಿಕಾರಕ್ಕೆ ತಂದಿರುವ  ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಗಳಾಗಬೇಕೆನ್ನುವುದು ನಮ್ಮೆಲ್ಲರ ಆಶಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂಎಸ್ ಚಿದಂಬರ್ , ಮನ್ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಲಹಳ್ಳಿ ಅಶೋಕ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಅಂಜನಾ ಶ್ರೀಕಾಂತ್ , ರಾಜ್ಯ ಘಟಕದ ಶುಭದಾಯಿನಿ, ನಾಗರತ್ನ, ಸಿಎಂ ದ್ಯಾವಪ್ಪ ಅಭಿಲಾಶ್,ಉಮೇಶ್, ಗುರು, ಸಂಪತ್, ಪ್ರಶಾಂತ್ ಬಾಬು ಮತ್ತಿತರರಿದ್ದರು

Leave a Reply

Your email address will not be published. Required fields are marked *

error: Content is protected !!