Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ನೀರಾವರಿಗೆ ಸರ್ಕಾರದಿಂದ 25 ಸಾವಿರ ಕೋಟಿ ಅನುದಾನ: ಸಿದ್ದರಾಮಯ್ಯ

ನೀರಾವರಿಗೆ ಸರ್ಕಾರದಿಂದ 25 ಸಾವಿರ ಕೋಟಿ ಅನುದಾನ: ಸಿದ್ದರಾಮಯ್ಯ

  ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ 25 ಸಾವಿರ ಕೋಟಿ ಅನುದಾನ ನೀರಾವರಿ ಇಲಾಖೆಗೆ ನೀಡಿದೆ. ಹಿಂದಿನ ಯಾವ  ಸರ್ಕಾರವೂ ಈ ಮಟ್ಟದ ಅನುದಾನ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೃಷಿ ಪ್ರಗತಿಗಾಗಿ ವರ್ಷಕ್ಕೆ 19000 ಸಾವಿರ ಕೋಟಿ ಪಂಪ್ ಸೆಟ್ ಸಬ್ಸಿಡಿಯನ್ನು ರೈತರಿಗೆ ಕೊಟ್ಟಿದ್ದೇವೆ. 92 ವರ್ಷಗಳ ಬಳಿಕ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ  ಕೆ ಅರ್ ಎಸ್ ನಲ್ಲಿ ಸ್ಮಾರಕ ನಿರ್ಮಿಸಿ ಎಂದು ಕಾವೇರಿ ನಿಗಮದ ಎಂಡಿ ಅವರಿಗೆ ಸಿಎಂ ಸೂಚನೆ ನೀಡಿದರು.

ಕೃಷ್ಣರಾಜಸಾಗರದ ಒಟ್ಟು 124 ಅಡಿಯದಾಗಿದ್ದು,  49 TMC ನೀರಿನ ಸಾಮರ್ಥ್ಯವಿದೆ. 93 ವರ್ಷಗಳಲ್ಲಿ 76 ಬಾರಿ ಭರ್ತಿಯಾಗಿದೆ. 2023-24 ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೇ “ಸಿದ್ದರಾಮಯ್ಯ ಅವರ ಕಾಲುಗುಣ ಚನ್ನಾಗಿಲ್ಲ,  ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ಪ್ರಕೃತಿಯ ನಿಯಮದಂತೆ ಎಲ್ಲಾ ನಡೆಯುತ್ತದೆ.ಇದನ್ನು ಎಲ್ಲರೂ  ಅರ್ಥ ಮಾಡಿಕೊಳ್ಳಬೇಕು.ಕಾವೇರಿ ಜಲಾನಯನ ಪ್ರದೇಶದ ನಾಲೆ, ಅಣೆಕಟ್ಟು ಹಾಗೂ ಇತರೆ ಅಭಿವೃದ್ಧಿಗಾಗಿ ಕಾವೇರಿ ನೀರವಾರಿ ನಿಗಮಕ್ಕೆ 3000 ಕೋಟಿ ಹಣ ಕೊಟ್ಟಿದ್ದೇವೆ ಎಂದರು.

ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ. ನಾವು ಅಧಿಕಾರದಲ್ಲಿದ್ದಾಗ  ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆಯಾಗದಂತೆ  ನೋಡಿಕೊಳ್ಳಲಾಗಿದೆ ಎಂದರು

ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು  ಆದೇಶ ನೀಡುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!