Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಭಾರತೀ ಎಕ್ಸಲೆನ್ಸ್ ವಿದ್ಯಾರ್ಥಿ ನಿಲಯದಲ್ಲಿ ಊಟ ಸೇವಿಸಿ ಜ್ವರ, ವಾಂತಿ: 32 ವಿದ್ಯಾರ್ಥಿಗಳು ಅಸ್ವಸ್ಥ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಭಾರತೀನಗರದ ಜಿ. ಮಾದೇಗೌಡ ಶಿಕ್ಷಣ ಸಂಸ್ಥೆಯ ಭಾರ ತೀ ಎಕ್ಸಲೆನ್ಸ್ ಶಾಲೆಯ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಮಧ್ಯಾಹ್ನ ಊಟ ಸೇವಿಸಿದ 32 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜರುಗಿದೆ.

ಶಾಲೆಯ ಒಂದನೇ ತರಗತಿಯಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ 32 ವಿದ್ಯಾರ್ಥಿಗಳು ಗುರುವಾರ ಮಧ್ಯಾಹ್ನ ಅನ್ನ-ಸಾಂಬಾರ್‌ಸೇವಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಈ ವಿದ್ಯಾರ್ಥಿಗಳು ಇದ್ದಕ್ಕಿದ್ದಂತೆ ಜ್ವರ, ವಾಂತಿ ಮತ್ತು ಹೊಟ್ಟೆ ನೋವಿ ನಿಂದ ಅಸ್ವಸ್ಥರಾಗಿದ್ದಾರೆ.

ತಕ್ಷಣ ಅವರನ್ನು ಚಿಕಿತ್ಸೆಗೆ ಒಳಪಡಿ ಸಿದಾಗ ಊಟ ಸೇವನೆಯಿಂದ ಅಸ್ವಸ್ಥರಾಗಿದ್ದಾರೆ ಎಂದು ಗೊತ್ತಾಗಿದೆ. ಅಸ್ವಸ್ಥಗೊಂಡ 32 ವಿದ್ಯಾರ್ಥಿಗಳ ಪೈಕಿ 16 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, 11 ವಿದ್ಯಾರ್ಥಿಗಳು ಡಿಸ್ಟಾಜರ್ ಆಗಿ ದ್ದಾರೆ. ಉಳಿದ ವಿದ್ಯಾರ್ಥಿಗಳನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಮಿಮ್ಸ್ ಆಸ್ಪತ್ರೆಯಲ್ಲಿನಾಲ್ಕು, ಪ್ರಗತಿ, ಸ್ಪಂದನ ಮತ್ತು ರವಿ ನರ್ಸಿಂಗ್ ಹೋಮ್ ನಲ್ಲಿ ತಲಾ ಒಬ್ಬರು ವಿದ್ಯಾರ್ಥಿಗಳು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ನೋಡಲ್ ಅಧಿ ಡಾ.ಬೆಟ್ಟಸ್ವಾಮಿಗೌಡ ಕಾರಿ ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮೋಹನ್, ಪ್ರಭಾರ ತಾಲೂಕು ಆರೋಗ್ಯ ಅಧಿಕಾರಿ ಡಾ.ರವಿಶಂಕರ್‌ಸೇರಿದಂತೆ ಇಲಾಖೆ ವೈದ್ಯರು ಹಾಗು ಸಿಬ್ಬಂದಿ ಆಸ್ಪತ್ರೆ ಗಳಿಗೆ ಭೇಟಿ ৯, ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಯಾವುದೇ ಆತಂಕಕ್ಕೆ ಒಳಗಾಗದಂತೆ ವಿದ್ಯಾರ್ಥಿಗಳ ಪೋಷಕರಿಗೆ ಧೈರ್ಯ ತುಂಬಿದ್ದಾರೆ.

Leave a Reply

Your email address will not be published. Required fields are marked *

error: Content is protected !!