Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ರಸ್ತೆ,ಚರಂಡಿ ಅಭಿವೃದ್ಧಿ ಕಾಮ ಗಾರಿಗೆ ಶಾಸಕ ರಮೇಶಬಾಬು ಚಾಲನೆ

ಮಂಡ್ಯ ತಾಲ್ಲೂಕಿನ ಬೇವಿನಹಳ್ಳಿ ಗ್ರಾಪಂ ವ್ಯಾಪ್ತಿಯ ಕ್ಯಾತುಂಗೆರೆ ಗ್ರಾಮದ ಸಿದ್ದೇಶ್ವರನಗರದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮ ಗಾರಿಗೆ ಶಾಸಕ ಎ.ಬಿ.ರಮೇಶ ಬಂಡಿ ಸಿದ್ದೇಗೌಡ ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು 50 ಲಕ್ಷ ರೂ.ವೆಚ್ಚದಲ್ಲಿ ಕೆಆರ್‌ಐಡಿಎಲ್ ವತಿ ಯಿಂದ ನಿರ್ಮಿಸುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ಜನತೆಗೆ ಉತ್ತಮ ರಸ್ತೆ ಸೌಲಭ್ಯ ಒದಗಿಸುವ ಮೂಲಕ ಅವರ ದಿನನಿತ್ಯದ ಜೀವನ ಸುಗಮಗೊಳಿಸುವುದು ನಮ್ಮ ಉದ್ದೇಶ ಎಂದ ಅವರು ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ರಸ್ತೆ ಕಾಮಗಾರಿಯನ್ನು ಪೂರ್ಣ ಗೊಳಿಸುವ ಮೂಲಕ ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೃಷ್ಣ, ಕಾಳೇನಹಳ್ಳಿ ಮಂಜುನಾಥ್, ಗ್ರಾಪಂ ಸದಸ್ಯರಾದ ನವೀನ್,ಲೋಕೇಶ್, ಕಾಳೇ ಗೌಡ, ಪಿಡಿಒ ಚಾಮರಾಜು, ಗುತ್ತಿಗೆದಾರ ಪಿ.ಬಿ.ಕರೀಗೌಡ, ಸೇರಿದಂತೆ ಮತ್ತಿತರರು ಹಾಜರಿದ್ದರು

Leave a Reply

Your email address will not be published. Required fields are marked *

error: Content is protected !!