Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ದುದ್ದದಲ್ಲಿ ಯಶಸ್ವಿಯಾಗಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಾವೇಶ ಸಭೆ


ಮಂಡ್ಯ:ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲೀಕರಣಕ್ಕೆ ನೆರವಾಗಿವೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್  ತಿಳಿಸಿದರು.
ತಾಲೂಕಿನ ದುದ್ದ ಗ್ರಾಮದಲ್ಲಿ  ನಡೆದ ದುದ್ದ ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಕುರಿತ ಸಮಾವೇಶ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸರ್ಕಾರದ ಐದು ಗ್ಯಾರಂಟಿಗಳು ಪ್ರತಿ ಕುಟುಂಬಕ್ಕೆ ನೀಡುವ ಮೂಲಕ ಆರ್ಥಿಕ ಶಕ್ತಿ ನೀಡಿ ಗ್ಯಾರಂಟಿ ಯೋಜನೆಗಳಿಂದ ಪ್ರತಿಯೊಬ್ಬರ ತಲಾ ಆಧಾಯ ರಾಷ್ಟ್ರದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪಿಸಿ  ಆರ್ಥಿಕ ಶಕ್ತಿ ತುಂಬುತಿವೆ ಎಂದರು.
ಹಳ್ಳಿಗಳಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗಳು ಸಾಮಾನ್ಯ ವ್ಯಕ್ತಿಗಳ ಶೋಷಣೆ ಮಾಡುತ್ತಿವೆ  ಮಹಿಳೆಯರು ತಮ್ಮ ವ್ಯಾಪ್ತಿಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ನಿಗ್ರಹಿಸಬೇಕು ಎಂದು  ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಅನುಷ್ಠಾನ ಸಮಿತಿ ತಾಲೂಕು ಸದಸ್ಯ ಹೆಚ್.ಎಂ. ಉದಯ್ ಕುಮಾರ್ ಮಾತನಾಡಿ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರೇರಣೆಯಿಂದ ವಿವಿಧ ರಾಜ್ಯಗಳಲ್ಲಿ ಇದೇ ರೀತಿಯ ಯೋಜನೆಗಳನ್ನು ಅಲ್ಲಿನ ಸರ್ಕಾರಗಳು ಜಾರಿ ಮಾಡುತ್ತಿವೆ. ನಮ್ಮ ಗ್ಯಾರಂಟಿ ಯೋಜನೆಗಳ ಸ್ಥಿರತೆಗೆ ಇದು ಸಾಕ್ಷಿ.ಇದರಿಂದ ಯುವಕರು, ಮಹಿಳೆಯರು ಆರ್ಥಿಕ ಸಬಲತೆ ಹೊಂದಿದ್ದಾರೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲ ಅಧಿಕಾರಿಗಳು,  ಕೈ ಜೋಡಿಸಬೇಕು.ಗ್ರಾಮ ಪಂಚಾಯತಿ ಮಟ್ಟದಲ್ಲಿ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಅರ್ಹ ಫಲಾನುಭವಿಗಳಗೆ ಯೋಜನೆಗಳು ಸಿಗುವಂತೆ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಪಂಚ ಗ್ಯಾರಂಟಿ ಅಧಿಕಾರಿಗಳ ಸಹಕಾರದಿಂದ  ದುದ್ದ ಹೋಬಳಿಯ 11 ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಸ್ಯೆ ಕುರಿತು ಸಭೆ ನೆಡೆಸಿ ಇದೀಗ ಗ್ಯಾರಂಟಿ ಯೋಜನೆಗಳ ಸಮಾವೇಶ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಜೂನ್ ತಿಂಗಳ ಗೃಹಲಕ್ಷ್ಮಿ ಹಣ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಮಹಿಳೆಯರಿಗೆ ಅವರ ಖಾತೆಗೆ ಡಿಬಿಟಿ ಮೂಲಕ ಪಾವತಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ
ಕೆ.ಎಸ್.ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ಮಹಿಳೆಯರು ಸ್ವಾವಲಂಬಿಯಾಗಲು ವಿವಿಧ ಇಲಾಖೆಗಳಿಂದ ದೊರೆಯುವ ಸಾಲ ಸೌಲಭ್ಯದ ಬಗ್ಗೆ ಹಾಗೂ ಮನೆಯಲ್ಲೇ ಸ್ವಂತ ಉದ್ಯೋಗ ಮಾಡಲು ಸವಿಸ್ತಾರವಾಗಿ ಮಹಿಳೆಯರಿಗೆ
ಸ್ಮಿತಾಪುಟ್ಟಣ್ಣಯ್ಯನವರು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಮಾವೇಶಕ್ಕೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗವಹಿಸಿದಾಗ ಅವರನ್ನು ಸನ್ಮಾನಿಸಲಾಯಿತು.
ಸಮಾವೇಶದಲ್ಲಿ  ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರಸ್ವಾಮಿ, ಟಿಪಿಓ ವೆಂಕಟರಾಮ್, ಚಂಪಕಮಾಲಿನಿ, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿತ್ರವರದಿ: ಕೆ.ಪಿ.ಕುಮಾರ್ ಹೊಳಲು

Leave a Reply

Your email address will not be published. Required fields are marked *

error: Content is protected !!