
ಮಂಡ್ಯ: ಶ್ರೀರಂಗಪಟ್ಟಣ ತಾಲೂಕು ಅರಕೆರೆ ಹೋಬಳಿಯ ಚೆನ್ನನಕೆರೆ ಗ್ರಾಮದಸರ್ವೆ ನಂಬರ್ 78 ರಲ್ಲಿ ಇರುವ ಪರಿಶಿಷ್ಟ ಸಮುದಾಯಕ್ಕೆ ಸೇರಿರುವ ಸ್ಮಶಾನದ ಜಾಗವನ್ನು ಜೆ.ಆರ್ ಬಾಲಕೃಷ್ಣ ಎಂಬ ವ್ಯಕ್ತಿ ಅಕ್ರಮವಾಗಿ ಒತ್ತುವರಿ ಮಾಡಿ ಗಣಿಗಾರಿಕೆಯನ್ನು ಮಾಡಿಕೊಂಡು ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ನಷ್ಟ ಉಂಟು ಮಾಡಿರುತ್ತಾರೆ ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ತಾಲೂಕಿನ ಚೆನ್ನನಕೆರೆ ಗ್ರಾಮದ ಪರಿಶಿಷ್ಟ ಸಮುದಾಯಕ್ಕೆ ಸರ್ಕಾರವು 1997/98ನೇ ಸಾಲಿನಲ್ಲಿ ಸರ್ವೆ ನಂಬರ್ 78 ರಲ್ಲಿ ಒಂದು ಎಕರೆ 19 ಗುಂಟೆ ಜಾಗವನ್ನು ಪರಿಶಿಷ್ಟ ಸಮುದಾಯದ ಸ್ಮಶಾನಕ್ಕೆ ಮಂಜೂರು ಮಾಡಿರುತ್ತದೆ. ಈ ಪ್ರದೇಶದ ಪಕ್ಕದಲ್ಲಿ ಜಕ್ಕನಹಳ್ಳಿ ಗ್ರಾಮದ ಜೆ.ಆರ್ ಬಾಲಕೃಷ್ಣ ರವರಿಗೆ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆಯಿಂದ ಸರ್ವೆ ನಂಬರ್ 78 ರಲ್ಲಿ ಪರವನಾಗಿ SY.NO-78,QL333,&QL605 ನಲ್ಲಿ ಗಣಿಗಾರಿಕೆ ಮಾಡಲು ಪರವಾನಗಿ ಕೊಟ್ಟಿರುತ್ತಾರೆ. ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚುವರಿಯಾಗಿ ಜಾಗವನ್ನು ಅತಿಕ್ರಮಣ ಮಾಡಿಕೊಂಡು ಗಣಿಗಾರಿಕೆ ಮಾಡುತ್ತಿದ್ದಾರೆ. ಇದರ ಜೊತೆ ಇದೆ ಸರ್ವೆ ನಂಬರ್ 78 ರಲ್ಲಿ ಪರಿಶಿಷ್ಟ ಸಮುದಾಯದ ಸ್ಮಶಾನದಲ್ಲಿಯೂ ಕೊಡ ಅಕ್ರಮ ಗಣಿಗಾರಿಕೆ ಮಾಡಿದ್ದಾರೆ.ಅಲ್ಲದೆ ಪರವಾನಗಿ ಪಡೆಯದೇ ಸರ್ಕಾರಕ್ಕೆ ಸೇರಿದ 4 ರಿಂದ 5 ಎಕರೆ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ಮಾಡಿ ಸರ್ಕಾರಕ್ಕೆ ಮೋಸ ಮಾಡಿರುತ್ತಾರೆ.ಎರಡು ವರ್ಷದ ಹಿಂದೆ ಸರ್ವೆ ನಂಬರ್ 78, QL333,&QL605 ರಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿರುವ ಜೆ ಆರ್ ಬಾಲಕೃಷ್ಣ ರವರ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಯ ಅಧಿಕಾರಿಗಳು ದೂರು ದಾಖಲಿಸಿದ್ದರೂ ಸಹ, ಯಾವುದೇ ಭಯ ಇಲ್ಲದೆ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ರಾಜಧನ ವನ್ನು ನಷ್ಟ ಉಂಟುಮಾಡಿದ್ದಾರೆ.
ಈ ವಿಚಾರವಾಗಿ ಚೆನ್ನನಕೆರೆ ಗ್ರಾಮದ ಡಾ. ಬಿ ಅರ್ ಅಂಬೇಡ್ಕರ್ ಸಂಘದ ಅಧ್ಯಕ್ಷರಾದ ನಿಂಗರಾಜ್ ಹಾಗೂ ಗ್ರಾಮಸ್ಥರು ಜೆ ಆರ್ ಬಾಲಕೃಷ್ಣ ರವರನ್ನ ಪ್ರಶ್ನಿಸಲು ಹೋದಾಗ ಅವ್ಯಾಚ ಶಬ್ಧಗಳಿಂದ ನಿಂದಿಸಿದ್ದಾರೆ. ಆದುದರಿಂದ ಜೆ. ಆರ್ ಬಾಲಕೃಷ್ಣ ರವರ ಮೇಲೆ ಕಾನೂನು ರೀತ್ಯ ಕ್ರಮ ಕೈಗೊಂಡು ಪರಿಶಿಷ್ಟ ಸಮುದಾಯಕ್ಕೆ ಸೇರಿದ 1.19 ಗುಂಟೆ ಸ್ಮಶಾನದ ಜಾಗವನ್ನು ಬಿಡಿಸಿಕೊಡಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ನಂತರ ಗ್ರಾಮಸ್ಥರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೂ ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮಸ್ಥರಾದ ಡಾ. ಬಿ ಆರ್ ಅಂಬೇಡ್ಕರ್ ಸಂಘದ ಅಧ್ಯಕ್ಷರಾದ ನಿಂಗರಾಜ್, ಮಹದೇವ್ ಆರ್, ಮದನ್,ಭರತ್, ಪ್ರಜ್ವಲ್, ಸಿ ಎಲ್ ಕೃಷ್ಣ, ಸಿ ಕೆ ನಿಂಗರಾಜ್, ಮಹದೇವು, ಸಂತೋಷ್ ಸೇರಿದಂತೆ ಹಲವು ಗ್ರಾಮಸ್ಥರು ಇದ್ದರು.

Leave a Reply