
ಮಂಡ್ಯ: ಇಂಜಿನಿಯರ್ಗಳು ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಾರೆ, ಅವರ ಕುಟುಂಬಕ್ಕೆ ಸ್ವಲ್ಪ ಸಮಯ ಮೀಸಲಿಡುವುದು ಮುಖ್ಯವಾಗಬೇಕು ಎಂದು ಕಾವೇರಿ ನೀರಾವರಿ ನಿಗದಮ ಆಧೀಕ್ಷಕ ಇಂಜಿನಿಯರ್ ರಘುರಾಮನ್ ಅಭಿಪ್ರಾಯ ಪಟ್ಟರು.
ನಗರದ ಕಾವೇರಿ ನೀರಾವರಿ ನಿಗಮದ ಆವರಣದಲ್ಲಿ ಲಯನ್ಸ್ ಕ್ಲಬ್ ಆಫ್ ಇಂಜಿನಿಯರ್, ಮಧುರ ಲಯನ್ಸ್, ಮಂಡ್ಯ ಲಯನ್ಸ್ ವತಿಯಿಂದ ನಡೆದ ಸರ್.ಎಂ.ವಿಶ್ವೇಶ್ವರಯ್ಯ ಜನ್ಮದಿನದಲ್ಲಿ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಎಂಜಿನಿಯರ್ ವೃತ್ತಿಯಲ್ಲಿ ಸಾಧನೆ ಮಾಡಿದ ಸರ್ಎಂ.ವಿಶ್ವೇಶ್ವರಯ್ಯ ದಿನಾಚರಣೆ ಅಂಗವಾಗಿ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಡೆಸಲಾಗುತ್ತಿದೆ. ಅದರ ಭಾಗವಾಗಿ ಮಂಡ್ಯದಲ್ಲಿಯೂ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ ಎಂದರು.
ನಿವೃತ್ತ ಡಿಎಚ್ಒ ಡಾ.ಮರಿಗೌಡ ಮಾತನಾಡಿ, ಯುವಕರು ಧೂಮಪಾನ ಮತ್ತು ಮದ್ಯಪಾನಕ್ಕೆ ದಾಸರಾಗುತ್ತಿದ್ದಾರೆ, ಇದರಿಂದ ಆದಷ್ಟು ದೂರ ಇರಬೇಕು. ಚಿಕ್ಕ ವಯಸ್ಸಿನಲ್ಲಿ ಹಲವು ರೋಗಗಳಿಗೆ ತುತ್ತಾಗುವುದರಿಂದ ನಿಮ್ಮನ್ನೆ ನಂಬಿಕೊಂಡಿರು ಕುಟುಂಬಸ್ಥರ ಗತಿಯೇನು. ಇದನ್ನು ಎಲ್ಲರೂ ಅರ್ಥ ಮಾಡಿಕೊಂಡು ಸಾಗಬೇಕು ಎಂದು ಮನವಿ ಮಾಡಿದರು.
ಪ್ರತಿಯೊಬ್ಬರು ಉತ್ತಮ ಹಾಗೂ ಪೌಷ್ಠಿಕ ಆಹಾರವನ್ನು ಮಾತ್ರ ಸೇವಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಜೀರ್ಣವಾಗದ ಉದಾಹರಣೆಗೆ ಮಾಂಸಾಹಾರ ಮತ್ತು ಜಂಕ್ಸ್ಫುಡ್ಗಳನ್ನು ಅತಿಯಾಗಿ ಸೇವಿಸಬಾರದು. ಸೊಪ್ಪು, ತರಕಾರಿಗಳನ್ನು ಯೆಥೇಚ್ಚವಾಗಿ ಬಳಸಿಕೊಳ್ಳುವುದು ಮುಖ್ಯವಾಗಬೇಕು ಎಂದು ಸಲಹೆ ನೀಡಿದರು.
ಡಾ.ಕೃಷ್ಣಮೂರ್ತಿ ಮಾತನಾಡಿ, ಜನರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕಾಲಕಾಲಕ್ಕೆ ಅನುಗುಣವಾಗಿ ದೇಹದ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವ ಮೂಲಕ ಮಧುಮೇಹ, ಹೃದಯ ಸ್ತಂಬನ ಸೇರಿದಂತೆ ಇತರೆ ದೇಹದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದನ್ನು ತಡೆಯಲು ಸಮೀಪದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಅಥವಾ ಸಲಹೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಯಪಾಲಕ ಇಂಜಿನಿಯರ್ ಜೆ.ನಂಜುಂಡೇಗೌಡ, ಲಯನ್ಸ್ ರಾಜ್ಯಪಾಲ ಕೆ.ಎಲ್.ರಾಜಶೇಖರ್, ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ವೈ.ಎಸ್.ಸಿದ್ದೇಗೌಡ, ಲಯನ್ಸ್ ಚಂದ್ರುಲಿಂಗು, ಜಿ.ಎನ್.ಕೆಂಪರಾಜು, ಮನುಕುಮಾರ್, ಕಿರಣ್ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Leave a Reply