
ಪೌತಿ ಖಾತೆ ಮಾಡಲು ಲಂಚಕ್ಕೆ ಬೇಡಿಕೆಯನ್ನು ಪಿಡಿಒ ಇಟ್ಟಿದ್ದ ಪಿಡಿಓರೊಬ್ಬರೂ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವಂತ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರಿನ ತಾಲೂಕಿನ ತಗ್ಗಹಳ್ಳಿ ಗ್ರಾಮ ಪಂಚಾತಾಲೂಕಿನಯಿತಿ ತಗ್ಗಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಸಚಿನ್ ಎಂಬುವರೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರಾಗಿದ್ದಾರೆ.
ಮದ್ದೂರಿನ ತಾಲೂಕಿನ ತಗ್ಗಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಸಚಿನ್ ಎಂಬುವರು ಪೌತಿ ಖಾತೆ ಮಾಡಿಕೊಡಲು ಚಿಕ್ಕೋನಹಳ್ಳಿ ಗ್ರಾಮದ ಶಿವಲಿಂಗಯ್ಯ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ಲೋಕಾಯುಕ್ತಕ್ಕೆ ಶಿವಲಿಂಗಯ್ಯ ದೂರು ನೀಡಿದ್ದರು. ಇಂದು 5,000 ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಪಿಡಿಓ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
5,000 ರೂ.ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪಿಡಿಓ ಸಚಿನ್ ನ್ನು ವಶಕ್ಕೆ ಪಡೆದಿದ್ದಾರೆ.
ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು, ಕುಮಾರ್ ಹಾಗೂ ಬ್ಯಾಟರಾಯನಗೌಡರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಲಂಚ ಪಡೆಯುತ್ತಿದ್ದಾಗಲೇ ಮದ್ದೂರಿನ ತಗಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಸಚಿನ್ ನ್ನು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply