Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಡಿ.ಸಿ.ಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ,ಉಪಾಧ್ಯಕ್ಷರಾಗಿ ಚಲುವರಾಜ್ ಆಯ್ಕೆ

ಮಂಡ್ಯ ಡಿ.ಸಿ.ಸಿ ಬ್ಯಾಂಕ್ ಚುನಾವಣೆಯಲ್ಲಿ ಸಚಿನ್ ಚಲುವರಾಯಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಆಯ್ಕೆಯಾದ ನಂತರ ಮಾತನಾಡಿದ ಅವರು ಈ ಗೆಲುವಿಗೆ ಕಾರಣರಾದ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೂ ಧನ್ಯವಾದ ಮುಖ್ಯ 12 ಜನ ನಿರ್ದೇಶಕರಿಗೂ ಧನ್ಯವಾದ ತಿಳಿಸಿದರು.

ಶಂಕರೇಗೌಡರು ಹಾಗೂ ಚೌಡೇಗೌಡರು ಸ್ಥಾಪಿಸಿದ ಸಂಸ್ಥೆ ಡಿ.ಸಿ.ಸಿ ಬ್ಯಾಂಕ್ ಅಲ್ಲಿಂದಲೂ ಉತ್ತಮ ಕೆಲಸ ಮಾಡಿಕೊಂಡು ಬರುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಜೋಗಿಗೌಡರು ಸಹ ಉತ್ತಮ ಕಾರ್ಯಗಳನ್ನು ರೂಪಿಸಿಕೊಂಡು ಬಂದಿದೆ. ಮುಂದಿನ ದಿನಗಳಲ್ಲಿ ಡಿ.ಸಿ.ಸಿ ಬ್ಯಾಂಕ್ ನ ಎಲ್ಲಾ ಸಿಬ್ಬಂದಿ ವರ್ಗದ ಜೊತೆ ಸಮನ್ವಯ ಸಾಧಿಸಿ ಉತ್ತಮ ಕೆಲಸ ಮಾಡಲಾಗುವುದು ಎಂದರು.

ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ನರೇಂದ್ರ ಸ್ವಾಮಿಯವರು ಮಾತನಾಡಿ ಮೊದಲೇ ಬಾರಿಗೆ ಹೆಚ್ಚಿನ ಬಹುಮತ ಪಡೆದು ಒಮ್ಮತ ನಿರ್ಧಾರಕ್ಕೆ ಬಂದು ಒಗ್ಗಟ್ಟನ್ನು ಸಾಧಿಸಿದ್ದೇವೆ. ಈ ಒಗ್ಗಟ್ಟು ಸಾಧಿಸು ಸಹಕಾರಿಯಾದ ಎಲ್ಲಾ ನಾಯಕರಿಗೆ ಇದರ ಕೀರ್ತಿ ಸಲ್ಲುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಸಹಕಾರಿಗಳಿಗೆ, ರೈತ ಪರ ಚಿಂತನೆಯ ಜೊತೆಗೆ ಕೈಗಾರಿಕೆಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಡಿ.ಸಿ.ಸಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತದೆ. ಡಿ.ಸಿ.ಸಿ ಬ್ಯಾಂಕ್ ನ ನೂತನವಾಗಿ ಅಧ್ಯಕ್ಷ ಸಚಿನ್ ಹಾಗೂ ಉಪಾಧ್ಯಕ್ಷರಾದ ಚಲುವರಾಜ್ ಅವರಿಗೆ ಅಭಿನಂದನೆ ತಿಳಿಸಿದರು.

ಉಪವಿಭಾಗಾಧಿಕಾರಿ ಶಿವಮೂರ್ತಿ ಅವರು ಮಾತನಾಡಿ ಅಧ್ಯಕ್ಷ ಸ್ಥಾನಕ್ಕೆ ಸಚಿನ್ ಸಿ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚಲುವರಾಜ್ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರವನ್ನು ಪರಿಶೀಲಿಸಿ ನಾಮಪತ್ರವನ್ನು ಅಂಗೀಕರಿಸಲಾಗಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿರುವುದರಿಂದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ 5 ವರ್ಷದ ಅವಧಿ ಅಧ್ಯಕ್ಷರಾಗಿ ಸಚಿನ್ ಮಾತು ಉಪಾಧ್ಯಕ್ಷರಾಗಿ ಚೆಲುವರಾಜ್ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!