Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಮುಡಾ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಿ.ಪಿ.ಪ್ರಕಾಶ್ ನೇಮಕ


ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಿ.ಪಿ.ಪ್ರಕಾಶ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬಿ.ಪಿ.ಪ್ರಕಾಶ್ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಇವರ ಜೊತೆಗೆ ಗುತ್ತಲು ಕಾಲೋನಿಯ ಇದ್ರೀಸ್ ಖಾನ್, ಕಲ್ಲಹಳ್ಳಿಯ ಕೆ.ಜಿ.ಕಾರ್ತಿಕ್, ಸಾತನೂರಿನ ಎನ್.ಎಸ್.ಮಹೇಶ್ ಹಾಗೂ ಅಶೋಕನಗರದ ಕಮಲಮ್ಮ ಎಂಬುವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ಆದೇಶ ಹೊರಡಿಸಿದ್ದಾರೆ.
ಬಿ.ಪಿ.ಪ್ರಕಾಶ್ ಅವರು ಈ ಹಿಂದೆ ನಗರಸಭೆ ನಾಮನಿರ್ದೇಶನ ಸದಸ್ಯರಾಗಿದ್ದರು. ನಂತರ ಜೊತೆಗೆ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಹೌಸಿಂಗ್ ಬೋರ್ಡ್ ಹುಡ್ಕೋ ನಿವಾಸಿಗಳ ಸೊಸೈಟಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಇವರ ಪಕ್ಷ ನಿಷ್ಠೆಗೆ ಸರ್ಕಾರ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ಮೂಡಾ ಅಧ್ಯಕ್ಷರಾಗಿ ಆಯ್ಕೆ ಮಾಡಲು ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಶಾಸಕ ಪಿ.ರವಿಕುಮಾರ್‌ಗೌಡ ಗಣಿಗ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್.ಆತ್ಮಾನಂದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ರುದ್ರಪ್ಪ, ಮಹಿಳಾಧ್ಯಕ್ಷೆ ಶುಭದಾಯಿನಿ, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ರಾಜ್ಯ ಉಪಾಧ್ಯಕ್ಷೆ ವಿಜಯಲಕ್ಷಿರಘುನಂದನ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಬೆಂಬಲ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಪಕ್ಷ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಪಕ್ಷದ ಸಂಘಟನೆಗೆ ಒತ್ತು ನೀಡಲಾಗುವುದು ಎಂದು ಬಿ.ಪಿ.ಪ್ರಕಾಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!