Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಅಕ್ಕ ಪಡೆ ಯೋಜನೆಗೆ ಸಚಿವ ಚಲುವರಾಯಸ್ವಾಮಿ ಚಾಲನೆ

ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡಲು ಅಕ್ಕ ಪಡೆ ಯೋಜನೆಗೆ ಚಾಲನೆಯನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ಚಾಲನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪೋಲೀಸ್‌ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಮಹಿಳಾ ಗೃಹ ರಕ್ಷಕರನ್ನೊಳಗೊಂಡು ಅಕ್ಕ ಪಡೆಯನ್ನು ಮಂಡ್ಯ ಜಿಲ್ಲೆಯಲ್ಲಿ ರಚಿಸಲಾಗಿದೆ.

ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕಪಡೆಯ ಪ್ರಾಥಮಿಕ ಉದ್ದೇಶವಾಗಿದೆ. ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತವಾಗಿರುವ ಅಕ್ಕಪಡೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಮತ್ತು ಸ್ಪಂದಿಸುವ ಸುರಕ್ಷತಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ.

ಅಕ್ಕ ಪಡೆ ಯೋಜನೆಯ ತಂಡದವರು ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವುದು ಮತ್ತು ಮಹಿಳೆಯರು ಮತ್ತು ಮಕ್ಕಳನ್ನು ಒಳಗೊಂಡ ಸಂಕಷ್ಟದಲ್ಲಿರುವವರ ಕರೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತದೆ. ಲಿಂಗ ಸಮಾನತೆ, ಮಕ್ಕಳ ರಕ್ಷಣೆ, ಕಾನೂನು ಹಕ್ಕುಗಳು ಸಹಾಯವಾಣಿಗಳು ಮತ್ತು ವರದಿ ಮಾಡುವ ಕಾರ್ಯವಿಧಾನಗಳಂತಹ ವಿಷಯಗಳ ಕುರಿತು ಶಾಲೆ, ಮಾರುಕಟ್ಟೆ ಮತ್ತು ನೆರೆಹೊರೆಗಳಲ್ಲಿ ಕಾನೂನು ಅರಿವು ಅಭಿಯಾನಗಳನ್ನು ನಡೆಸುವುದು.ಮತ್ತು ಸಮುದಾಯದಲ್ಲಿ ಸ್ನೇಹಪರ ಮತ್ತು ವಿಶ್ವಾಸಾರ್ಹ ಸ್ಥಿತಿಯನ್ನು ಸ್ಥಾಪಿಸುವುದು ಸಂತ್ರಸ್ಥೆಯರಿಗೆ ಯಾವುದೇ ಭಯವಿಲ್ಲದೆ ಕಾನೂನು ಸಹಾಯ ಪಡೆಯಲು ಪ್ರೋತ್ಸಾಹಿಸುತ್ತದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್, ಸಿಇಓ ನಂದಿನಿ ಕೆ.ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಆಶಾ, ಅಪರ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!