
ಮಂಡ್ಯ ತಾಲೂಕಿನ ಸಾತನೂರು ಗ್ರಾಮದಲ್ಲಿ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಉಚಿತ ಲ್ಯಾಪ್ ಟ್ಯಾಪ್ ಮತ್ತು ನೋಟ್ ಬುಕ್ ವಿತರಣಾ ಕಾರ್ಯಕ್ರಮವು ನಡೆಯಿತು.
ಸಾತನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ ಲ್ಯಾಪ್ಟ್ಯಾಪ್ ಮತ್ತು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನು ಗ್ರಾಮ ಪಂಚಾಯಿತಿ ಸದಸ್ಯ ವೆಂಕಟೇಶ್ ಅವರು ಗ್ರಾಮದ ಮುಖಂಡರೊಂದಿಗೆ ವಿತರಣೆ ಮಾಡಿದರು.
ನಂತರ ಮಾತನಾಡಿದ ಗ್ರಾ. ಪಂ ಸದಸ್ಯ ವೆಂಕಟೇಶ್ ಶಾಸಕ ಗಣಿಗ ರವಿಕುಮಾರ್ ಅವರು ಮಂಡ್ಯ ಕ್ಷೇತ್ರವನ್ನು ರಾಜ್ಯದಲ್ಲಿ ಅತ್ಯುತ್ತಮವಾದ ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ. ಇದು ಹೆಮ್ಮೆಯ ವಿಚಾರವಾಗಿದ್ದು, ಮಂಡ್ಯ ಕ್ಷೇತ್ರವನ್ನು ಅಭಿವೃದ್ಧಿಯತ್ತ ಸಾಗುತ್ತಿರುವುದಕ್ಕೆ ಕಾರಣವಾಗಿದೆ. ಅವರ ಜನ್ಮದಿನದಂದು ಇಂದು ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಮತ್ತು ನೋಟ್ ಬುಕ್ ಗಳನ್ನು ವಿತರಣೆ ಮಾಡುವ ಮೂಲಕ ಶಾಸಕ ರವಿಕುಮಾರ್ ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಮನು, ಮುಖಂಡರಾದ ಮಧುಸೂದನ್, ಗ್ರಾ. ಪಂ ಸದಸ್ಯ ಸುರೇಶ್, ಕುರುಬರ ಸಂಘದ ಶ್ರೀನಿವಾಸ್, ಮಹೇಶ್,ರಾಜಣ್ಣ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಮಮತಾ,ಕೋನಪ್ಪ ಯೋಗೇಶ್, ಚನ್ನಪ್ಪ ಹಾಗೂ ಸಾತನೂರು ಗ್ರಾಮದ ಯಜಮಾನರು ಮುಖಂಡರುಗಳು ಹಾಜರಿದ್ದರು.

Leave a Reply