
ಮಂಡ್ಯ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಬೇಕು ಮತ್ತು ದೌರ್ಜನ್ಯ ಪ್ರಕರಣಗಳು ಮತ್ತು ಅಸ್ಪೃಶ್ಯತೆ ಆಚರಣೆಯ ಸಾಮಾಜಿಕ ಧೋರಣೆಯನ್ನು ತೊಲಗಿಸಬೇಕು ಎಂದು ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಅಧ್ಯಕ್ಷರಾದ ಡಾ. ಮೂರ್ತಿ .ಎಲ್ ರವರು ಹೇಳಿದರು.
ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಸಭೆಯಲ್ಲಿ ಮಾತನಾಡಿ ಜಿಲ್ಲೆಯಲ್ಲಿ 46 ರಿಂದ 47 ದೌರ್ಜನ್ಯ ಪ್ರಕರಣಗಳು ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದಲ್ಲಿ ದಾಖಲಾಗಿವೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕಾನೂನುನಾತ್ಮಕ ದೌರ್ಜನ್ಯ ಪ್ರಕರಣಗಳ ಗಂಭೀರ ತೊಡಕುಗಳನ್ನು ಬಗೆಹರಿಸಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಕುಂದು ಕೊರತೆಗಳು ಮತ್ತು ನಗರಸಭೆಯ ಗಂಭೀರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರದಲ್ಲಿ ಪರಿಶೀಲಿಸಬೇಕು. ಎಂದು ಹೇಳಿದರು.
ರಾಜ್ಯದಲ್ಲಿ 10 ಜಿಲ್ಲೆಗಳ ಪ್ರವಾಸ ಮಾಡಿ ಅಧಿಕಾರಿಗಳ ಜೊತೆ ಸಭೆ ನಡೆಸಿ ದೌರ್ಜನ್ಯ ಪ್ರಕರಣಗಳ ಬಗ್ಗೆ ಕಟ್ಟುನಿಟ್ಟಾದ ಕ್ರಮವಹಿಸುವಂತೆ ಸೂಚಿಸಿದ್ದಾರೆ.
ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದನೆ ಬಹಳ ಮುಖ್ಯ.ಜಿಲ್ಲೆಯು ಸರ್ವತೋಮುಖ ಅಭಿವೃದ್ಧಿಗೆ ಅಧಿಕಾರಿಗಳು ಶ್ರದ್ದೆ ವಹಿಸಿ ಕೆಲಸ ಮಾಡಬೇಕು ಎಂದು ಹೇಳಿದರು.
ಅರಣ್ಯ ಪ್ರದೇಶದಲ್ಲಿ ವಾಸಿಸಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಪರಿಹರಿಸಬೇಕು
ಜಿಲ್ಲೆಯಲ್ಲಿ ಜಮೀನು ವಿಚಾರವಾಗಿ ದಾರಿ,ಸ್ಮಶಾನ, ಸರ್ವೆ ದುರಸ್ತಿ,ಪ್ರಕರಣಗಳನ್ನು ಶೀಘ್ರವಾಗಿ ಪರಿಶೀಲಿಸಬೇಕು ಎಂದು ಹೇಳಿದರು.
ಮಾರ್ಚ್ 7 ರಂದು ಜಿಲ್ಲಾಡಳಿತ ವತಿಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳು ಮತ್ತು ಅಸ್ಪೃಶ್ಯತಾ ನಿವಾರಣಾ ಕಾಯ್ದೆ ಯ ಅರಿವು ಕಾರ್ಯಾಗಾರವನ್ನು ನಗರದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಸಮಾಜದ ಎಲ್ಲಾ ವರ್ಗದವರು ಮತ್ತು ಮುಖಂಡರುಗಳು ಕಾರ್ಯಗಾರವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಸ್ಪೃಶ್ಯತೆ ಆಚರಣೆಯು ಸಮಾಜಕ್ಕೆ ಕಳಂಕವಾಗಿದೆ. ಎಲ್ಲಾ ಮುಖಂಡರುಗಳು ಮತ್ತು ಸಾರ್ವಜನಿಕರು ಅಸ್ಪೃಶ್ಯತೆ ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ, ಕಾರ್ಯಕ್ರಮದ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಅಹವಾಲು ಸ್ವೀಕಾರ
ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಸಭೆಯಲ್ಲಿ ಸಾರ್ವಜನಿಕರು ಮತ್ತು ಸಂಘ ಸಂಘಟನೆಗಳ ಅಹವಾಲು ಸ್ವೀಕರಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಕುಮಾರ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಕಾವ್ಯ, ಪೊಲೀಸ್ ಉಪ ಅಧಿಕ್ಷಕರಾದ ಗಂಗಾಧರ್ ಸ್ವಾಮಿ, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಉಪಾಧ್ಯಕ್ಷರಾದ ವಿಜಯಲಕ್ಷ್ಮಿ, ಮುಡಾ ಅಧ್ಯಕ್ಷರಾದ ಬಿ. ಪಿ. ಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply