Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಹೆಗ್ಗಳಿಕೆ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ- ಎಚ್ ಆರ್ ಅರವಿಂದ್

ಮಂಡ್ಯ: ಭ್ರಷ್ಠಾಚಾರ ರಹಿತ ಕೇಂದ್ರ ಸರ್ಕಾರ ಮುನ್ನೆಡೆಸುತ್ತಿರುವ ಹೆಗ್ಗಳಿಕೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಸಲ್ಲಿಸುತ್ತದೆ ಎಂದು ಜಿಲ್ಲಾ ಬಿಜೆಪಿ ಮುಖಂಡ ಎಚ್.ಆರ್.ಅರವಿಂದ್ ಸಂಭ್ರಮವ್ಯಕ್ತಪಡಿಸಿದರು.
ನಗರದಲ್ಲಿರುವ ಶ್ರೀಚಾಮುಂಡೇಶ್ವರಿ ದೇವಾಯದಲ್ಲಿ ಜಿಲ್ಲಾ ಬಿಜೆಪಿ ಮುಖಂಡ ಎಚ್.ಆರ್.ಅರವಿಂದ್ ಆಯೋಜಿಸಿದ್ದ ನರೇಂದ್ರ ಮೋದಿ ಅವರು ೪೩೯೯ (೧೨ವರ್ಷ) ದಿನಗಳ ಸುದೀರ್ಘಕಾಲ ದೇಶದ ಅತ್ಯುತ್ತಮ  ಪ್ರಧಾನಮಂತ್ರಿಯಾಗಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಸಂಭ್ರಮಕ್ಕಾಗಿ ಆಯಸ್ಸು-ಆರೋಗ್ಯ ವೃದ್ದಿಗಾಗಿ ವಿಶೇಷ ಪೂಜೆ-ಸಿಹಿವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ಆಯ್ಕೆಯಾದ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಭಾಜನರಾಗಿದ್ದಾರೆ,  ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನ ಮುರಿದು 4,399 ದಿನಗಳ ನಿರಂತರ ಸೇವೆಯ ಮೈಲುಗಲ್ಲು ತಲುಪಿದ್ದಾರೆ ಎಂದು ನುಡಿದರು.
2014ರ ಮೇ 26 ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರು ಇಂದಿಗೆ 4,399ಕ್ಕೆ ಹೆಚ್ಚು ದಿನಗಳ ನಿರಂತರ ಅಧಿಕಾರಾವಧಿಯನ್ನ ಪೂರೈಸಿದ್ದಾರೆ. ನೆಹರೂ ಅವರ ದಾಖಲೆಯು ಕಳೆದ ೬೪ ವರ್ಷಗಳಿಂದಲೂ ಅಚ್ಚಳಿಯದೇ ಉಳಿದಿತ್ತು ಎಂದು ತಿಳಿಸಿದರು.
ಜಾಗತಿಕ ಮಟ್ಟದಲ್ಲಿ ಬಲಿಷ್ಠ ಆರ್ಥಿಕತೆಯಾಗಿ ಹೊರಹೊಮ್ಮಲು ಈ ಆಡಳಿತವು ಪ್ರಮುಖ ಕಾರಣವಾಗಿದೆ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಾವಧಿಯು ಭಾರತದ ಇತಿಹಾಸದಲ್ಲಿ ಆರ್ಥಿಕ ಸುಧಾರಣೆ, ತಂತ್ರಜ್ಞಾನ ಆಧಾರಿತ ಅಭಿವೃದ್ಧಿ ಮತ್ತು ದೀರ್ಘಾವಧಿಯ ದೂರದೃಷ್ಟಿಯ ಯೋಜನೆಗಳಿಗೆ ಸಾಕ್ಷಿಯಾಗಿದೆ. ದೇಶದಾದ್ಯಂತ ಮೂಲಸೌಕರ್ಯ, ಕಲ್ಯಾಣ ಯೋಜನೆಗಳು ಮತ್ತು ಡಿಜಿಟಲೀಕರಣದ ಮೂಲಕ ಭಾರತವು ಆರ್ಥಿಕ ಪ್ರಗತಿಯತ್ತ ಸಾಗುತ್ತಿದೆ ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರಿಗೆ ಮನವಿ
2004ರಲ್ಲಿ ಉತ್ತಮ ಆಡಳಿತ ನೀಡಿದ ವಾಜಪೇಯಿ ಅವರನ್ನು ನಾವು ಕಳಕೊಂಡೆವು, ಆ ಸಂದರ್ಭದಲ್ಲಿ ವಾಜಪೇಯಿ ಅವರು ಮಾಡಿದ ಅಭಿವೃದ್ದಿ ಕಾರ್ಯಗಳನ್ನು ಕಾರ್ಯಕರ್ತರು ಶ್ರೀಸಾಮಾನ್ಯರಿಗೆ ತಲುಪಿಸುವಲ್ಲಿ ವಿಫಲರಾದೇವು, ಈಗ ಆಗಾಗುವುದು ಬೇಡ, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸೋಣ, ಅಧಿಕಾರದಲ್ಲಿ ಇಲ್ಲ ಎಂದು ಸೋತುಕೊಳ್ಳುವುದು ಬೇಡ ಎಂದು ಮನವಿ ಮಾಡಿದರು.
ಒಮ್ಮೆ ಪ್ರಧಾನಿಯಾಗಿ, ಮುಖ್ಯಮಂತ್ರಿಯಾಗಿ ಅತ್ಯುನ್ನತ ರಸ್ತೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿ, ಉದ್ಘಾಟನೆ ಮಾಡುವಷ್ಟರೊಳಗೆ ಅವಧಿ ಮುಗಿದಿರುತ್ತದೆ, ಆದರೆ ನರಂದ್ರಮೋದಿ ಅವರ ಆಡಳಿತದಲ್ಲಿ ಎಲ್ಲವೂ ಬಹುಬೇಗ ಆಗುತ್ತಿವೆ, ಇಂತಹ ಪ್ರಧಾನಿಗಳನ್ನು ಪಡೆದ ನಾವು ಧನ್ಯರು ಎಂದು ಹೇಳಿದರು.

*ಕಾಂಗ್ರೆಸಿಗರಿಗೆ ಎಚ್ಚರಿಕೆ*
ಕೆಲವೊಂದು ಕಾಂಗ್ರೆಸ್ ಕಾರ್ಯಕರ್ತರು, ಶಾಸಕರು, ಮಂತ್ರಿಗಳು ಪ್ರಧಾನಿ ನರೇಂದ್ರಮೋದಿ ಅವರ ಆಡಳಿತ ವೈಕರಿಯನ್ನು ಸಹಿಸದೇ ತೆಗಳುವುದು, ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡುವುದು ಹೆಚ್ಚಾಗುತ್ತಿದೆ, ಕಾಲ್ಪನಿಕವಾಗಿ ಮಾತನಾಡಿವುದು ಸರಿಯಲ್ಲ, ಎಂದು ಖಂಡಿಸಿದರು.
ಪ್ರದೀಪ್ ಈಶ್ವರ್ ಎನ್ನುವ ವ್ಯಕ್ತಿ ಸಮಾಜ ತಿದ್ದುವ ಸಂಸ್ಥೆ ಇಟ್ಟುಕೊಂಡು, ಪ್ರಧಾನಿ ಮೋದಿ ಅವರ ಬಗ್ಗೆ ತೆಗಳುವಂತೆ ಮಾತನಾಡುತ್ತಿರುವುದು ಸರಿಯಲ್ಲ, ತೀರ ಅಸಹ್ಯ ಹುಟ್ಟಿಸುತ್ತದೆ, ಮೋದಿ ಅವರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಕಿಡಿಕಾರಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಿಹಿವಿತರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಪ್ರಸನ್ನ, ಪುಟ್‌ಬಾಲ್ ಮಂಜುನಾಥ್ ಮತ್ತಿತರರಿದ್ದರು.

Leave a Reply

Your email address will not be published. Required fields are marked *

error: Content is protected !!