Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಸುವರ್ಣ ಕರ್ನಾಟಕ ಮಹೋತ್ಸವ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ – ಡಾ. ಮೀರಾ ಶಿವಲಿಂಗಯ್ಯ

ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಮ್ಮೇಳನದ ಸಂಚಾಲಕಿ ಡಾ.ಮೀರಾ ಶಿವಲಿಂಗಯ್ಯ ರವರಿಗೆ ಸುವರ್ಣ ಕರ್ನಾಟಕ ಮಹೋತ್ಸವ ಪ್ರಶಸ್ತಿಗೆ ಸಂಕೀರ್ಣ ಕ್ಷೇತ್ರದಲ್ಲಿ ಆಯ್ಕೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ  ಅವರು ಕರ್ನಾಟಕ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.

ಅವರು ಜನರ ಧ್ವನಿ ಯೊಂದಿಗೆ ಮಾತನಾಡಿ ಕರ್ನಾಟಕ ಸರ್ಕಾರ ಸುವರ್ಣ ಮಹೋತ್ಸವ ಪ್ರಶಸ್ತಿ ನೀಡಿರುವುದು ಸಂತೋಷ ತಂದಿದೆ ಎಂದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರತಿ ವರ್ಷ ಬರುತ್ತದೆ. ಆದರೆ ಸುವರ್ಣ ಮಹೋತ್ಸವ ಜೀವಮಾನದಲ್ಲಿ ಒಂದು ಬಾರಿ ಬರುತ್ತದೆ. ಈ ಪ್ರಶಸ್ತಿ ಜೀವಮಾನದ ಅತ್ತುನ್ನತ ಪ್ರಶಸ್ತಿ ಎಂದು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. 1956ರ ನವೆಂಬರ್ 1 ರಂದು ಕನ್ನಡ ಪ್ರಾಂತ್ಯವಾಗಿ ಮೈಸೂರು ಹೆಸರು ನೀಡಿತ್ತು , ಮತ್ತೆ 1973ರ ನವೆಂಬರ್ 1 ರಂದು ಕರ್ನಾಟಕ ರಾಜ್ಯವೆಂದು ಮರು ನಾಮಕರಣಗೊಂಡ ಸಂದರ್ಭದಲ್ಲಿ ನಮ್ಮ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿತ್ತು ಮತ್ತೆ ಈಗ ಕರ್ನಾಟಕ ಸಂಭ್ರಮ-50ರ ಸುಸಂದರ್ಭದಲ್ಲಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿ, ಈ ಪ್ರಶಸ್ತಿಯಿಂದ ಇನ್ನಷ್ಟು ಜವಾಬ್ಧಾರಿ ಹೆಚ್ಚಾಗಿದೆ ಎಂದರು.

ಇದೇ ರೀತಿ ರಂಗಭೂಮಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮಂಡ್ಯದ ಲಕ್ಷ್ಮಣಯ್ಯ ಹಾಗೂ ರಾಜು ಮಳವಳ್ಳಿ ಅವರಿಗೆ ಈ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಕರ್ನಾಟಕ ಸಂಭ್ರಮ-50ರ ಅಭಿಯಾನದ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ 50 ಜನ ಪುರುಷ ಮತ್ತು 50 ಜನ ಮಹಿಳಾ ಸಾಧಕರಿಗೆ 2024ನೇ ಸಾಲಿನ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ಪ್ರಕಟಿಸಿದೆ.

Leave a Reply

Your email address will not be published. Required fields are marked *

error: Content is protected !!