
ಸಾಲದ ಭಾಧೆ ತಾಳಲಾರದೆ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಹಳೇ ಬೂದನೂರು ಗ್ರಾಮದ ಬಳಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕ ತ್ಯಾಗ (30) ಬೂದನೂರು ಗ್ರಾಮದ ನಿವಾಸಿಯಾಗಿದ್ದು, ಈತ ಕ್ರಿಕೆಟ್ ಬೆಟ್ಟಿಂಗ್, ಇಸ್ಪೀಟು ಜೂಜಿಗೆ ಸಿಲುಕಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಬೆಟ್ಟಿಂಗ್ ದಂಧೆಯ ಸಾಲಗಾರರ ಕಿರುಕುಳ ತಾಳಲಾರದೆ ಬೂದನೂರು ಬಳಿ ರೈಲಿಗೆ ತಲೆಕೊಟ್ಟುಯುವಕ ಆತ್ಮಹತ್ಯೆಗೆ ಶರಣಾಗಿದ್ದನೆ.ಈ ಬಗ್ಗೆ ರೈಲ್ವೆ ಪೋಲಿಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply