
ಡಿ.20,21,22 ರಂದು ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯ ಜಿಲ್ಲೆಯ ಗ್ರಾಮ ಪಂಚಾಯತಿ ಅಧ್ಯಕ್ಷರು,ಸದಸ್ಯರುಗಳನ್ನು ಕಡೆಗಣಿಸಲಾಗಿದೆ ಎಂಬ ಮಾತು ಕೇಳಿ ಬಂದಿದೆ.
ಮಂಡ್ಯ ಜಿಲ್ಲೆಯ ಗ್ರಾಮ ಗ್ರಾಮಗಳಲ್ಲಿ ಸಂಚರಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ ನ ಪ್ರಚಾರ ರಥಯಾತ್ರೆಯ ಸಂದರ್ಭದಲ್ಲಿ ಪ್ರಚಾರ ಯಾತ್ರೆಯು ಗ್ರಾಮ ಪಂಚಾಯಿತಿಗಳಿಗೆ ಬರುವ ವಿಚಾರವಾಗಿ ಯಾವುದೇ ಚರ್ಚೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು,ಸದಸ್ಯರು , ಒಕ್ಕೂಟದ ಜೊತೆಯಾಗಲಿ ಚರ್ಚೆ ನಡೆಸಿಲ್ಲ ಎಂಬ ಮಾತು ಕೇಳಿ ಬಂದಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಕೆಲವು ಪದಾಧಿಕಾರಿಗಳು ಗ್ರಾಮ ಪಂಚಾಯತಿಗಳಿಗೆ ಪ್ರಚಾರ ರಥಯಾತ್ರೆ ಬರುವ ಬಗ್ಗೆ ಮಾಹಿತಿ ನೀಡಿ ಸ್ವಾಗತಿಸಲು ಸಕಲ ಸಿದ್ಧತೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿರುವುದು ಗ್ರಾಮ ಪಂಚಾಯತಿ ಸದಸ್ಯರ ಅಸಮಾಧಾನಕ್ಕೆ ಕಾರಣವಾಗಿದೆ.

ಕನ್ನಡ ಸಾಹಿತ್ಯ ಪರಿಷತ್ ನಿಂದ ದಿನಾಂಕ 28-10-2024 ರಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ
ಸಾಹಿತ್ಯ ಸಮ್ಮೇಳನದ ಪ್ರಚಾರ ರಥವು ಜಿಲ್ಲೆಯಾದ್ಯಂತ ಸಂಚರಿಸುವ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಶಿಕ್ಷಕರು, ಉಪನ್ಯಾಸಕರು ,ಆಶಾ ಕಾರ್ಯಕರ್ತರು ,,ಅಂಗನವಾಡಿ ಕಾರ್ಯಕರ್ತರು ಇತರ ಅಧಿಕಾರಿಗಳು ಪ್ರಚಾರ ರಥವು ಆಗಮಿಸುವ ಸಂದರ್ಭದಲ್ಲಿ ಪ್ರಚಾರ ರಥದ ಸ್ವಾಗತ ಕಾರ್ಯಕ್ರಮವನ್ನು ಏರ್ಪಡಿಸಿ ಯಶಸ್ವಿಗೊಳಿಸುವಂತೆ ಕ್ರಮವಹಿಸುವಂತೆ ಕೋರಿದ್ದಾರೆ. ಆ ಪತ್ರದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರನ್ನು ಉಲ್ಲೇಖಿಸಿಲ್ಲ.
ಕನ್ನಡ ಸಾಹಿತ್ಯ ಪರಿಷತ್ ನ ಪತ್ರದಂತೆ ಜಿಲ್ಲಾ ಪಂಚಾಯತ್ ನ ಸಿಇಓ ರವರು ದಿನಾಂಕ 30-10 2024 ರಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಾಗೂ ಮಂಡ್ಯ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದು ಡಿಸೆಂಬರ್ 20, 21,22 ರಂದು ನಡೆಯುವ 87 ನೇ ಅಖಿಲ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸುವಂತೆ ಪತ್ರ ಬರೆದಿದ್ದಾರೆ. ಆಪತ್ರದಲ್ಲಿಯೂ ಗ್ರಾಮ ಪಂಚಾಯತಿ ಅಧ್ಯಕ್ಷರು,ಸದಸ್ಯರನ್ನು ನಮೂದಿಸದೇ ಇರುವುದು ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನು ಖಂಡಿಸಿ ಗ್ರಾಮ ಪಂಚಾಯತಿಯ ಸೋಮವಾರ ಮಂಡ್ಯ ತಾಲೂಕಿನಲ್ಲಿ ಪ್ರಚಾರ ರಥಯಾತ್ರೆಯೂ ಗ್ರಾಮಗಳಿಗೆ ಆಗಮಿಸಿದ ಸಂದರ್ಭದಲ್ಲಿ ಬೂದನೂರು ಸೇರಿದಂತೆ ಕೆಲ ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯರು ಭಾಗವಹಿಲ್ಲ ಎಂಬ ಮಾತು ಕೇಳಿ ಬಂದಿದೆ.
ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು,ಸದಸ್ಯರುಗಳನ್ನು ಸಮ್ಮೇಳನದ ಆಯೋಜಕರು ಪರಿಗಣಿಸಲಿ ಎಂಬ ಒತ್ತಾಯವಾಗಿದೆ..

Leave a Reply