Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಜಿಲ್ಲೆಯಲ್ಲಿ ಬೆಟ್ಟಿಂಗ್ ದಂದೆಗೆ ಕಡಿವಾಣ ಹಾಕಿ: ಡಾ.ಕುಮಾರ

ಮಂಡ್ಯ ಜಿಲ್ಲೆಯಲ್ಲಿ ಬೆಟ್ಟಿಂಗ್ ದಂಧೆಗೆ ಸಿಲುಕಿ ಯುವಕನೊಬ್ಬ ಮನನೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಬಹಳ ನೋವಿನ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ಅವರು  ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿವಿಧ ಸಂಘಟನೆಗಳು ಹಾಗೂ ಅಧಿಕಾರಿಗಳ
ಸಭೆ ನಡೆಸಿ ಮಾತನಾಡಿದರು.ಜೂಜು ಹಾಗೂ ಕ್ರಿಕೆಟ್ ಬೆಟ್ಟಿಂಗ್ ದಂಧೆಯು ಯುವಕರುಗಳನ್ನು ದಾರಿ ತಪ್ಪಿಸುತ್ತಿದ್ದು ಅವರನ್ನು ಸಾಲದ ಸುಳಿಯಲ್ಲಿ ಸಿಲುಕುವಂತೆ ಮಾಡುತ್ತಿದೆ. ಜನಪರ ಸಂಘಟನೆಗಳು ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಿ ಜೂಜು ಹಾಗೂ ಬೆಟ್ಟಿಂಗ್ ಗಳಿಂದ ದೂರವಿಡಿ ಎಂದರು.

ಜಿಲ್ಲೆಯಲ್ಲಿ ಆರೋಗ್ಯಕರ ಸಮಾಜದ ನಿರ್ಮಾಣ ಮಾಡಲು ಬೆಟ್ಟಿಂಗ್, ಇಸ್ಪೀಟು ಹಾಗೂ ಯಾವುದೇ ರೀತಿಯ ಜೂಜುಗಳ ಬಗ್ಗೆ ಮಾಹಿತಿ ಅಥವಾ ದೂರು ನೀಡಲು ಪೊಲೀಸ್ ಇಲಾಖೆಯಿಂದ ಸಹಾಯವಾಣಿಯನ್ನು ತೆರೆಯಲಾಗುವುದು. ದೂರುದಾರರ ಹೆಸರನ್ನು ಗೌಪ್ಯವಾಗಿಡುವಂತೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದರು

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಟ್ಟಿಂಗ್ ದಂಧೆಯ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಬೆಟ್ಟಿಂಗ್, ಇನ್ನಾವುದೇ ಜೂಜುಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಮಾಡಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ತಿಮ್ಮಯ್ಯ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಆನಂದ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್ ಹೆಚ್ ನಿರ್ಮಲ, ತಹಶೀಲ್ದಾರ್ ಶಿವಕುಮಾರ್ ಬಿರಾದಾರ್, ಮುಖಂಡರುಗಳಾದ ಎಂ ಬಿ ನಾಗಣ್ಣಗೌಡ, ಸಿ ಕುಮಾರಿ, ಚಂದ್ರು, ಹೆಚ್ ಡಿ ಜಯರಾಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!