
ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯು ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದು, ಇದಕ್ಕಾಗಿ ಹೆಲ್ಪ್ ಲೈನ್ ನಂಬರ್ ಆರಂಭಿಸಿದೆ.
ಮಂಡ್ಯ ಜಿಲ್ಲೆಯಾಧ್ಯಂತ ಕಾನೂನು ಬಾಹಿರವಾಗಿ ಇಸ್ಪಿಟ್, ಜೂಜಾಟ, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ ಸೇರಿದಂತೆ ಇತರೆ ಮಾದಕ ವಸ್ತುಗಳ ಮಾರಾಟ ಮತ್ತು ಮದ್ಯ ಮಾರಾಟ ಮಾಡುವವರ ಮಾಹಿತಿಗಳನ್ನು ಸಾರ್ವಜನಿಕರು ನೀಡಲು ಹೆಲ್ಪ್ ಲೈನ್ ನಂಬರ್ ಆರಂಭಿಸಿರುವುದಾಗಿ ತಿಳಿಸಿದೆ.
ಸಾರ್ವಜನಿಕರು ಜಿಲ್ಲಾ ಪೊಲೀಸ್ ಕಚೇರಿಯ 08232-227100 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ಜಿಲ್ಲೆಯಲ್ಲಿನ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಸಹಕರಿಸುವಂತೆ ಹಾಗೂ ಮಾಹಿತಿ ನೀಡುವವರ ಹೆಸರುಗಳನ್ನು ಗೌಪ್ಯವಾಗಿ ಇಡಲಾಗುವುದು ಎಂಬುದಾಗಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply