
ಮಂಡ್ಯ: ಶಾಲಾ ಹಂತದಲ್ಲಿನ ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅನಾವರಣಗೊಳ್ಳಲು ವೇದಿಕೆ ಮುಖ್ಯ ಎಂದು ನಗರಸಭೆ ಅಧ್ಯಕ್ಷ ಪ್ರಕಾಶ್ ನಾಗೇಶ್ ಹೇಳಿದರು.
ನಗರದಲ್ಲಿರುವ ಜಿಲ್ಲಾ ಬಾಲ ಭವನದಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಡ್ಯ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಮಂಡ್ಯ ಇವರು ಆಯೋಜಿಸಿದ್ದ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾವು ಶಾಲೆಗಲ್ಲಿ ಓದುತ್ತಿದ್ದಾಗ ಮಕ್ಕಳ ದಿನಾಚರಣೆಯ ರಜೆ ಇದೆ ಎಂದು ಕಾಲಹರಣ ಮಾಡುತ್ತಿದ್ದೇವು.ಆದರೆ ಇಂದಿನ ವಿದ್ಯಾರ್ಥಿಗಳು ರಜಾದಿನಗಳಲ್ಲಿ ಪಠ್ಯೇತರ ಚಟುವಟಿಕೆ, ಕೌಶಲಜ್ಞಾನ ವೃದ್ದಿಗೆ ಸದುಪಯೋಗ ಪಡಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದು ನುಡಿದರು.
ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಇಂತಹ ವೇದಿಕೆಗಳಲ್ಲಿ ಅನಾವರಣಗೊಳ್ಳಲಿ, ಬಾಲಭವನಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸಿ ಎಂದು ತಿಳಸಿದ್ದೀರಿ, ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೌಲಭ್ಯ ಕಲ್ಪಿಸಲು ಶ್ರಮಿಸುತ್ತೇವೆ ಎಂದರು.
ಬಳಿಕ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಸ್ ರಾಜಮೂರ್ತಿ, ಜಿಲ್ಲಾ ಬಾಲಭವನ ಸೊಸೈಟಿಯಿಂದ ಪ್ರತಿವರ್ಷ ಮಕ್ಕಳ ಕೌಶಲಜ್ಞಾನ ವೃದ್ದಿಗೆ ಪೂರಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ, ಮಕ್ಕಳು ಇಂದಿನ ಪ್ರಜೆಗಳು, ದೇಶದ ಸಂಪತ್ತು, ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಲಾಗುತ್ತಿದೆ ಎಂದರು.
ಮಕ್ಕಳ ದೈಹಿಕ-ಮಾನಸಿಕ ಬೆಳೆವಣಿಗೆಯಿಂದ ಇಡಿದು ಸಾಂಸ್ಕೃತಿಕ ಕೌಶಲಜ್ಞಾನ ಹೆಚ್ಚಿಸುವಲ್ಲಿಯೂ ಸೊಸೈಟಿ ಮತ್ತು ಇಲಾಖೆ ಮುಂದಾಗಿದೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ಉತ್ತೇಜನ ನೀಡಿದರೆ ಅವರು ಉತ್ತಮ ಪ್ರಜೆಗಲಾಗಿ ನಾಡಿಗೆ ಕೊಡುಗೆ ನೀಡುತ್ತಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಶಾಲೆಗಳಿಂದ ಆಗಮಿಸಿದ ಸ್ಪರ್ಧಾರ್ಥಿಗಳು ಚಿತ್ರಕಲೆ, ಭರತನಾಟ್ಯ, ನೃತ್ಯರೂಪ, ಗಾಯನ, ಏಕಪಾತ್ರಾಭಿಯನ, ಸಂಗೀತ ಪ್ರದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ನಗರಸಭಾ ಉಪಾಧ್ಯಕ್ಷ ಎಂ.ಪಿ ಅರುಣ್ ಕುಮಾರ್, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಕೋಮಲ್ ಕುಮಾರ್, ಜಿಲ್ಲಾ ಬಾಲ ಭವನ ಮೇಲ್ವಿಚಾರಕಿ ಕೋಮಲ, ತೀರ್ಪುಗಾರರು ಹಾಜರಿದ್ದರು.

Leave a Reply