
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಏಕಕಾಲದಲ್ಲಿ 25 ಕಡೆ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಸೇರಿದಂತೆ ರಾಜ್ಯದ 25 ಕಡೆ ಏಕಕಾಲದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಳಗಿನ ಜಾವ ಸವಿ ನಿದ್ರೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯಕ್ತ ಪೊಲೀಸರು ದುಸ್ವಪ್ನವಾಗಿ ಎಂಟ್ರಿ ಕೊಟ್ಟಿದ್ದಾರೆ. ಭ್ರಷ್ಟಾಚಾರ, ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಈ ದಾಳಿ ಮಾಡಿದ್ದಾರೆ. ಸದ್ಯ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಮಹೇಶ್ ಅವರು ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕಚೇರಿಯಲ್ಲಿ ಎಂಡಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲವು ದೂರು ಬಂದ ಹಿನ್ನೆಲೆ ಮಂಡ್ಯ ಲೋಕಾಯುಕ್ತ ಪೊಲೀಸರಿಂದ ದಾಳಿ ನಡೆದಿದೆ. ಮಂಡ್ಯದ ಕೆಆರ್‌ಎಸ್ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್, ಮಳವಳ್ಳಿಯ ದಳವಾಯಿ ಕೋಡಿಹಳ್ಳಿ ನಿವಾಸದಲ್ಲೂ ತಲಾಷ್ ನಡೆಯುತ್ತಿದೆ. ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆದಿದ್ದು, ಬೆಳಗ್ಗಿನಿಂದಲೇ ಲೋಕಾಯುಕ್ತ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply