Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಡಿ.3 ರಂದು ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ


ಮಂಡ್ಯ ಜಿಲ್ಲೆಯಲ್ಲಿ  ಎಲ್ಲಾ ತಾಲ್ಲೂಕುಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಹಾಗೂ ಹವಾಮಾನ ಇಲಾಖೆ ನೀಡಿರುವ ಮುನ್ನೆಚ್ಚರಿಕೆ ಕ್ರಮಗಳಲ್ಲಿ ಡಿಸೆಂಬರ್ 3 ರಂದು ಸಹ ನಿರಂತರ ಮಳೆ ಸುರಿಯುವುದಾಗಿ ಹಾಗೂ ಎಲ್ಲೂ (yellow  alert) ನ ಮುಂಜಾಗ್ರತಾ ಕ್ರಮ ವಹಿಸುವಂತೆ ತಿಳಿಸಲಾಗಿದೆ.

ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ನಿರಂತರ ಮಳೆಯ ಹಿನ್ನಲೆಯಲ್ಲಿ “ಡಿಸೆಂಬರ್ 3 ರಂದು ಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ)* ಜಿಲ್ಲಾಧಿಕಾರಿ ಡಾ: ಕುಮಾರ  ರಜೆ ಘೋಷಣೆ ಮಾಡಲಾಗಿದೆ.

ಈ ರಜೆಯು ಜಿಲ್ಲೆಯ ಸರ್ಕಾರಿ, ಖಾಸಗಿ ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ಎರಡನೇ ಪಿಯುಸಿ) ವರೆಗೆ ಅನ್ವಯವಾಗುತ್ತದೆ.

ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸುವಂತೆ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ನಿರ್ದೇಶನ ನೀಡಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!