ಮಂಡ್ಯ : ಹಾಲು ಉತ್ಪಾದಕರು ಹಿತ ಕಾಯುವ ನಿಟ್ಟಿನಲ್ಲಿ ಮಂಡ್ಯ ಹಾಲು ಒಕ್ಕೂಟ ಕೆಲಸ ಮಾಡುತ್ತಿದ್ದು, ಎಲ್ಲ ಸಹಕಾರ ಸಂಘಗಳಿಗೂ ಗಣಕೀಕರಣ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮನ್ಮುಲ್ ನಿರ್ದೇಶಕ ರಾಮಚಂದ್ರ ತಿಳಿಸಿದರು.
ತಾಲೂಕಿನ ಹಳೇಬೂದನೂರು ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಣಕೀಕರಣ ವ್ಯವಸ್ಥೆಯಿಂದಾಗಿ ಮೊಬೈಲ್ನಲ್ಲೇ ಎಲ್ಲ ಮಾಹಿತಿಯನ್ನು ಪಡೆಯಬಹುದಾಗಿದೆ. ಇದರಿಂದ ಎಷ್ಟು ಪ್ರಮಾಣದಲ್ಲಿ ಹಾಲು ಹಾಕಿz್ದೆÃವೆ. ಎಷ್ಟು ಹಣ ಬರಬೇಕಿದೆ. ಎಷ್ಟು ಹಣವನ್ನು ಉತ್ಪಾದಕರಿಗೆ ನೀಡಬೇಕು ಎಂಬಿತ್ಯಾದಿ ಎಲ್ಲ ಮಾಹಿತಿಗಳನ್ನು ಕುಳಿತಲ್ಲೇ ನೋಡಬಹುದಾಗಿದೆ ಎಂದು ಹೇಳಿದರು.
ಇದರಿಂದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಆಗುತ್ತಿದ್ದ ನಷ್ಟವನ್ನೂ ತಪ್ಪಿಸಬಹುದಾಗಿದೆ. ಒಕ್ಕೂಟದಿಂದ ಗುಣಮಟ್ಟದ ಹಾಲು ಕೊಡುವ ವ್ಯವಸ್ಥೆಯನ್ನೂ ಅಚ್ಚುಕಟ್ಟಾಗಿ ಮಾಡಿಸುತ್ತೇವೆ ಎಂದು ತಿಳಿಸಿದರು.
ಮಂಡ್ಯ ತಾಲೂಕಿನ ಬಹುತೇಕ ಗ್ರಾಮಗಳಲ್ಲೂ ಹಾಲು ಉತ್ಪಾದಕ ಕಟ್ಟಡಗಳು ಇವೆ. ಕೆಲವು ಕಡೆಗಳಲ್ಲಿ ಜಾಗದ ಸಮಸ್ಯೆ ಇರುವ ಕಾರಣ ನಿರ್ಮಾಣ ಆಗಿಲ್ಲ. ಮುಂದಿನ ದಿನಗಳಲ್ಲಿ ಸರಿಪಡಿಸಿ ಅಲ್ಲೂ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದರು.

ಮನ್ಮುಲ್ ಉಪಾಧ್ಯಕ್ಷ ರಘನಂದನ್ ಮಾತನಾಡಿ, ರಾಜ್ಯದಲ್ಲೇ ಮಂಡ್ಯ ಹಾಲು ಒಕ್ಕೂಟ ಗುಣಮಟ್ಟದಲ್ಲಿ ಮೊದಲ ಸ್ಥಾನದಲ್ಲಿದೆ. ಇದರಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ದೆಹಲಿಯಲ್ಲಿ ಮಾರುಕಟ್ಟೆ ಮಾಡಲು ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು.
ಪ್ರಸ್ತುತ ೧೦.೫೦ ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು, ಇದರಲ್ಲಿ ೬ ಲಕ್ಷ ಲೀಟರ್ ಹಾಲು ಮಾತ್ರ ಮಾರಾಟವಾಗುತ್ತಿದೆ. ಉಳಿದ ಹಾಲನ್ನು ಪೌಡರ್ ಮಾಡಿ ಅದನ್ನು ಶೇಖರಿಸಿಟ್ಟುಕೊಂಡು ದರ ಹೆಚ್ಚಳವಾದಾಗ ಮಾರಾಟ ಮಾಡಬೇಕಿತ್ತು. ಇಲ್ಲವೇ ನಷ್ಟ ಅನುಭವಿಸಬೇಕಾಗಿತ್ತು. ಗುಣಮಟ್ಟವಿರುವುದರಿಂದ ಹಾಲು ಮಾರಾಟಕ್ಕೆ ಅವಕಾಶ ಕಲ್ಪಿಸಿದೆ. ಇದನ್ನು ಪ್ರತಿಯೊಬ್ಬ ಹಾಲು ಉತ್ಪಾದಕರು ಅರ್ಥ ಮಾಡಿಕೊಂಡು ಗುಣಮಟ್ಟದ ಹಾಲನ್ನು ಹಾಕಬೇಕು ಎಂದು ಸಲಹೆ ನೀಡಿದರು.
ಪ್ರತಿಯೊಬ್ಬರೂ ರಾಸುಗಳಿಗೆ ವಿಮೆ ಮಾಡಿಸಬೇಕು. ರಾಸುಗಳು ಸಾವನ್ನಪ್ಪಿದರೆ ರೈತರಿಗೆ ಅನುಕೂಲವಾಗಲೆಂಬ ಉz್ದÉÃಶದಿಂದ ೧೦ ಕೋಟಿ ವಿಮಾ ಯೋಜನೆಗೆ ಹಣವನ್ನು ಠೇವಣಿ ಇಡಲಾಗಿದೆ ಎಂದರು.
ಹಳೇಬೂದನೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಚ್.ಎಸ್. ಮಧು ಮಾತನಾಡಿ, ನಮ್ಮ ಗ್ರಾಮಸ್ಥರು ಗುಣಮಟ್ಟದ ಹಾಲು ಸರಬರಾಜು ಮಾಡಿ ಸಂಘದ ಶ್ರೇಯೋಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಗಣ್ಯಮಂಡ್ಯ : ಹಾಲು ಉತ್ಪಾದಕರು ಹಿತ ಕಾಯುವ ನಿಟ್ಟಿನಲ್ಲಿ ಮಂಡ್ಯ ಹಾಲು ಒಕ್ಕೂಟ ಕೆಲಸ ಮಾಡುತ್ತಿದ್ದು, ಎಲ್ಲ ಸಹಕಾರ ಸಂಘಗಳಿಗೂ ಗಣಕೀಕರಣ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮನ್ಮುಲ್ ನಿರ್ದೇಶಕ ರಾಮಚಂದ್ರ ತಿಳಿಸಿದರು.
ತಾಲೂಕಿನ ಹಳೇಬೂದನೂರು ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಣಕೀಕರಣ ವ್ಯವಸ್ಥೆಯಿಂದಾಗಿ ಮೊಬೈಲ್ನಲ್ಲೇ ಎಲ್ಲ ಮಾಹಿತಿಯನ್ನು ಪಡೆಯಬಹುದಾಗಿದೆ. ಇದರಿಂದ ಎಷ್ಟು ಪ್ರಮಾಣದಲ್ಲಿ ಹಾಲು ಹಾಕಿz್ದೆÃವೆ. ಎಷ್ಟು ಹಣ ಬರಬೇಕಿದೆ. ಎಷ್ಟು ಹಣವನ್ನು ಉತ್ಪಾದಕರಿಗೆ ನೀಡಬೇಕು ಎಂಬಿತ್ಯಾದಿ ಎಲ್ಲ ಮಾಹಿತಿಗಳನ್ನು ಕುಳಿತಲ್ಲೇ ನೋಡಬಹುದಾಗಿದೆ ಎಂದು ಹೇಳಿದರು.
ಇದರಿಂದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಆಗುತ್ತಿದ್ದ ನಷ್ಟವನ್ನೂ ತಪ್ಪಿಸಬಹುದಾಗಿದೆ. ಒಕ್ಕೂಟದಿಂದ ಗುಣಮಟ್ಟದ ಹಾಲು ಕೊಡುವ ವ್ಯವಸ್ಥೆಯನ್ನೂ ಅಚ್ಚುಕಟ್ಟಾಗಿ ಮಾಡಿz್ದÉÃವೆ ಎಂದು ತಿಳಿಸಿದರು.
ಮಂಡ್ಯ ತಾಲೂಕಿನ ಬಹುತೇಕ ಗ್ರಾಮಗಳಲ್ಲೂ ಹಾಲು ಉತ್ಪಾದಕ ಕಟ್ಟಡಗಳು ಇವೆ. ಕೆಲವು ಕಡೆಗಳಲ್ಲಿ ಜಾಗದ ಸಮಸ್ಯೆ ಇರುವ ಕಾರಣ ನಿರ್ಮಾಣ ಆಗಿಲ್ಲ. ಮುಂದಿನ ದಿನಗಳಲ್ಲಿ ಸರಿಪಡಿಸಿ ಅಲ್ಲೂ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದರು.
ಮನ್ಮುಲ್ ಉಪಾಧ್ಯಕ್ಷ ರಘನಂದನ್ ಮಾತನಾಡಿ, ರಾಜ್ಯದಲ್ಲೇ ಮಂಡ್ಯ ಹಾಲು ಒಕ್ಕೂಟ ಗುಣಮಟ್ಟದಲ್ಲಿ ಮೊದಲ ಸ್ಥಾನದಲ್ಲಿದೆ. ಇದರಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ದೆಹಲಿಯಲ್ಲಿ ಮಾರುಕಟ್ಟೆ ಮಾಡಲು ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು.
ಪ್ರಸ್ತುತ ೧೦.೫೦ ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು, ಇದರಲ್ಲಿ ೬ ಲಕ್ಷ ಲೀಟರ್ ಹಾಲು ಮಾತ್ರ ಮಾರಾಟವಾಗುತ್ತಿದೆ. ಉಳಿದ ಹಾಲನ್ನು ಪೌಡರ್ ಮಾಡಿ ಅದನ್ನು ಶೇಖರಿಸಿಟ್ಟುಕೊಂಡು ದರ ಹೆಚ್ಚಳವಾದಾಗ ಮಾರಾಟ ಮಾಡಬೇಕಿತ್ತು. ಇಲ್ಲವೇ ನಷ್ಟ ಅನುಭವಿಸಬೇಕಾಗಿತ್ತು. ಗುಣಮಟ್ಟವಿರುವುದರಿಂದ ಹಾಲು ಮಾರಾಟಕ್ಕೆ ಅವಕಾಶ ಕಲ್ಪಿಸಿದೆ. ಇದನ್ನು ಪ್ರತಿಯೊಬ್ಬ ಹಾಲು ಉತ್ಪಾದಕರು ಅರ್ಥ ಮಾಡಿಕೊಂಡು ಗುಣಮಟ್ಟದ ಹಾಲನ್ನು ಹಾಕಬೇಕು ಎಂದು ಸಲಹೆ ನೀಡಿದರು.
ಪ್ರತಿಯೊಬ್ಬರೂ ರಾಸುಗಳಿಗೆ ವಿಮೆ ಮಾಡಿಸಬೇಕು. ರಾಸುಗಳು ಸಾವನ್ನಪ್ಪಿದರೆ ರೈತರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ೧೦ ಕೋಟಿ ವಿಮಾ ಯೋಜನೆಗೆ ಹಣವನ್ನು ಠೇವಣಿ ಇಡಲಾಗಿದೆ ಎಂದರು.
ಹಳೇಬೂದನೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಚ್.ಎಸ್. ಮಧು ಮಾತನಾಡಿ, ನಮ್ಮ ಗ್ರಾಮಸ್ಥರು ಗುಣಮಟ್ಟದ ಹಾಲು ಸರಬರಾಜು ಮಾಡಿ ಸಂಘದ ಶ್ರೇಯೋಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಗಣ್ಯರಿಗೆ ಹಾಗೂ ಹಿರಿಯ ಮುಖಂಡರನ್ನು ಸನ್ಮಾನಿಸಲಾಯಿತು.ಮನ್ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಪ್ಪ, ಮೈಷುಗರ್ ಮಾಜಿ ಅಧ್ಯಕ್ಷ ಬಿ.ಸಿ.ಶಿವಾನಂದ , ಬಿ.ಆರ್.ಶಿವಪ್ರಸಾದ್ , ಡಾ.ಮಂಜೇಶ್ಗೌಡ , ಮಂಡ್ಯ ತಾಲೂಕು ಜೆಡಿಎಸ್ ಅಧ್ಯಕ್ಷ ಬೂದನೂರು ಸ್ವಾಮಿ , ಬಿ.ಟಿ.ಚಂದ್ರಶೇಖರ್ , ಬೂದನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾನಸ , ಕೃಷ್ಣ ಅಂಕಪ್ಪ , ಸೇರಿದಂತೆ ಹಳೇಬೂದನೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳು , ನೌಕರ ವರ್ಗ ಹಾಗೂ ಗ್ರಾಮದ ಮುಖಂಡರುಗಳು ಹಾಜರಿದ್ದರು. ಹಾಗೂ ಹಿರಿಯ ಮುಖಂಡರನ್ನು ಸನ್ಮಾನಿಸಲಾಯಿತು.

Leave a Reply