Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಅದ್ದೂರಿ ಮೆರವಣಿಗೆ

ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ನಗಾರಿ ಬಾರಿಸುವುದರ ಮೂಲಕ ಚಾಲನೆ ನೀಡಿದರು. ಸಮ್ಮೇಳನ ಅಧ್ಯಕ್ಷರಾದ ಗೋ ರು ಚನ್ನಬಸವಪ್ಪ ರವರು ಸಮ್ಮೇಳನ ಅಧ್ಯಕ್ಷರಾಗಿದ್ದು ಕಾವೇರಿ ಮಾತೆಯನ್ನು ಪ್ರತಿಷ್ಠಾಪಿಸಿರುವ ರಥದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯ ಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಂದ್ರ ಜೋಶಿ ಸೇರಿದಂತೆ ಮಂಡ್ಯ ಜಿಲ್ಲೆಯ ಶಾಸಕರು ಚನ್ನಬಸವಪ್ಪನವರನ್ನು ಅಲಂಕೃತ ರಥದಲ್ಲಿ ಕೂರಿಸುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ನಂದಿಧ್ವಜ, ನಾದಸ್ವರ, ವೀರಗಾಸೆ, ತಮಟೆ, ಪೂಜಾ ಕುಣಿತ, ಡೊಳ್ಳು ಕುಣಿತ, ಹಾಲಕ್ಕಿ ಸುಗ್ಗಿ ಕುಣಿತ, ಕಂಸಾಳೆ, ಮಹಿಳಾ ವೀರಗಾಸೆ, ಕೀಲು ಕುದುರೆ, ಪಟ ಕುಣಿತ, ಪೂಜಾ ಕುಣಿತ, ತಮಟೆ ಸೇರಿದಂತೆ 157 ಕಲಾತಂಡಗಳು 2,250 ಕಲಾವಿದರು ಪಾಲ್ಗೊಂಡಿದ್ದಾರೆ.

31 ಜಿಲ್ಲೆಯಿಂದ 38 ಕಲಾತಂಡಗಳು ಹಾಗೂ ಆರು ಹೊರರಾಜ್ಯಗಳ ಕಲಾತಂಡಗಳು ಭಾಗವಹಿಸಿದ್ದು ವಿಶೇಷವಾಗಿತ್ತು.

Leave a Reply

Your email address will not be published. Required fields are marked *

error: Content is protected !!