
ಭಾರತದ ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರು ನಿಧನರಾಗಿರುವ ಹಿನ್ನಲೆಯಲ್ಲಿ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ಇಂದು (ಶುಕ್ರವಾರ) ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ಸರ್ಕಾರದ ಅಂಗ ಸಂಸ್ಥೆಗಳನ್ನು ಒಳಗೊಂಡಂತೆ ಎಲ್ಲಾ ಕಚೇರಿಗಳಿಗೆ ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಲ್ಲದೇ ನಾಳೆ ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Leave a Reply