Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ನಿಮ್ಮ ಗ್ರಾಮದಲ್ಲಿ ಸಮಸ್ಯೆಯೇ – ಸಹಾಯವಾಣಿಗೆ ಕರೆ ಮಾಡಿ

ಗ್ರಾಮಗಳಲ್ಲಿ ತಲೆದೋರುವ ಮೂಲಭೂತ ಸೌಕರ್ಯಗಳ ಸಮಸ್ಯೆಗಳ ಬಗ್ಗೆ ದೂರು ದಾಖಲಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಮಾಹಿತಿ,ಕುಂದು-ಕೊರತೆಗಳು ಹಾಗೂ ವಿವಿಧ ಸಮಸ್ಯೆಗಳನ್ನು ದಾಖಲಿಸಲು ಪಂಚಾಯತ್ ರಾಜ್ ಇಲಾಖೆಯಿಂದ ಸಹಾಯವಾಣಿಯನ್ನು ತೆರೆಯಲಾಗಿದೆ.
ಸಾರ್ವಜನಿಕರು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000 ಗೆ ಕರೆ ಮಾಡಿ ದೂರು ಅಥವಾ ಮನವಿ ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ.
ಗ್ರಾಮ ಪಂಚಾಯಿತಿಯಲ್ಲಿ ಆಸ್ತಿ ತೆರಿಗೆ ಪಾವತಿ, ಜನನ ಮತ್ತು ಮರಣ ಪ್ರಮಾಣ ಪತ್ರ, ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಕೆ, ಗ್ರಾಮದ ರಸ್ತೆ ದುರಸ್ಥಿಗೆ ಸಂಬಂಧಿಸಿದಂತೆ ದೂರು ನೀಡಲು ಮೇಲ್ಕಂಡ ಪಂಚಮಿತ್ರ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ಕುಂದುಕೊರತೆ ಬಗ್ಗೆ ಸಾರ್ವಜನಿಕರು ತಿಳಿಸಬಹುದಾಗಿದೆ.ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಲು ಅವಕಾಶವಿರಲಿದೆ.

Leave a Reply

Your email address will not be published. Required fields are marked *

error: Content is protected !!