Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತ

ಸಂಚಾರ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ದ್ವಿಚಕ್ರ ವಾಹನ ಸವಾರರು ಡಿಕ್ಕಿ ಹೊಡೆದುಕೊಂಡ ಘಟನೆ ಭಾನುವಾರ ನಡೆದಿದೆ.ಮಂಡ್ಯ ತಾಲ್ಲೂಕಿನ ಹೊಡಾಘಟ್ಟ ಗ್ರಾಮದ ಚಂದನ್, ನಗರದ ಅಜಯ್, ಹಾಲಹಳ್ಳಿ ಬತುಲಾ ಗಾಯಗೊಂ‍ಡವರು. ನಗರ ಸಂಚಾರ ಪೊಲೀಸರು, ನಂದಾ ವೃತ್ತದಲ್ಲಿ ಹೆಲ್ಮೆಟ್ ಧರಿಸದೆ ಇರುವ ದ್ವಿಚಕ್ರ ವಾಹನ ಸವಾರರಿಗೆ ದಂಡ ವಿಧಿಸುತ್ತಿದ್ದರು.
ಈ ವೇಳೆ ಚಂದನ್ ಮತ್ತು ಅಜಯ್ ಅವರು ತಮ್ಮ ದ್ಚಿಚಕ್ರ ವಾಹನದಲ್ಲಿ ಬರುತ್ತಿದ್ದರು. ಇದನ್ನು ಗಮನಿಸಿದ ಟ್ರಾಫಿಕ್‌ ಪೊಲೀಸರು ನಿಲ್ಲಿಸುವಂತೆ ಸೂಚನೆ ನೀಡಿದರು. ಆದರೆ, ಯುವಕರು ಅವರಿಂದ ತಪ್ಪಿಸಿಕೊಳ್ಳಲು ಹೋಗಿ ಗಾಬರಿಯಿಂದ ಎದುರುಗಡೆ ಚಲಿಸುತ್ತಿದ್ದ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಪಡಿಸಿದಾಗ ಇದರಲ್ಲಿದ್ದ ಮಹಿಳೆ ಬತುಲಾ ಅವರು ಕೆಳಗಡೆ ಬಿದ್ದರು. ಜೊತೆಗೆ ಮೂವರು ಗಾಯಗೊಂಡಿದ್ದಾರೆ.

ಪೊಲೀಸರು ಬ್ಯಾರಿಕೆಟ್ ಅನ್ನು ತಳ್ಳಿದ್ದರಿಂದ ಯುವಕರು ಗಾಯಗೊಂಡರು ಎಂದು ಆರೋಪಿಸಿ ಹೆದ್ದಾರಿಯಲ್ಲಿ ಕೆಲಕಾಲ ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಡಿವೈಎಸ್‌ಪಿ ಎಲ್‌.ಕೆ.ರಮೇಶ್‌ ಅವರು ಪರಿಸ್ಥಿತಿ ತಿಳಿಗೊಳಿಸಿದರು. ತಕ್ಷಣವೇ ಗಾಯಾಳುಗಳನ್ನು ಪೊಲೀಸರ ವಾಹನದಲ್ಲಿಯೇ ಸಮೀಪದ ಮಿಮ್ಸ್‌ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಳುಹಿಸಿಕೊಟ್ಟು ಹೆದ್ದಾರಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Leave a Reply

Your email address will not be published. Required fields are marked *

error: Content is protected !!