
ಬಾಳೆಹೊನ್ನಿಗ ಗ್ರಾಮದ ನಿವಾಸಿಯಾದ ಕೃಷ್ಣೇಗೌಡ ಎಂಬುವರ ಮಗಳಾದ 26 ವರ್ಷದ ಶರಣ್ಯ ಎಂಬುವರು ಮೃತರಾಗಿದ್ದಾರೆ.
ಇನ್ನೇನು 20 ದಿನಗಳಲ್ಲಿ ಮದುವೆಯಾಗಬೇಕಿದ್ದ ಶರಣ್ಯ ಕನಕಪುರ ತಾಲ್ಲೂಕು ಕಾಡನಹಳ್ಳಿ ತಾಲೂಕು ಪಂಚಾಯಿತಿಯಲ್ಲಿ ನರೇಗಾ ಯೋಜನೆಯ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.ಶನಿವಾರ ಬೆಳಿಗ್ಗೆ 10.30 ರ ಸಮಯದಲ್ಲಿ ಕಾರ್ಯನಿಮಿತ್ತ ಬಾಳೆಹೊನ್ನಿಗ ಗ್ರಾಮದಿಂದ ಹಲಗೂರು ಕಡೆಗೆ ತಮ್ಮ ಹೊಂಡಾ ಡಿಯೋದಲ್ಲಿ ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ಶರಣ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply