
ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಮಂಡ್ಯ ಜಿಲ್ಲಾ ಪಂಚಾಯತಿ ಸಿಇಓ ಶೇಕ್ ತನ್ವೀರ್ ಆಸೀಫ್ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸಿಇಓ ಶೇಕ್ ತನ್ವೀರ್ ಆಸೀಫ್ ರವರನ್ನು ಮೈಸೂರಿಗೆ ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ ಆದೇಶ ಹೊರಡಿಸಿದ್ದಾರೆ.
2023ರ ಮಾರ್ಚಿ ತಿಂಗಳಲ್ಲಿ ಮಂಡ್ಯ ಜಿಲ್ಲಾ ಪಂಚಾಯಿತಿಗೆ ಸಿಇಒ ಆಗಿ ನೇಮಕವಾದ ಶೇಕ್ ತನ್ವೀರ್ ಆಸೀಫ್ ರವರು ದಕ್ಷ ಅಧಿಕಾರಿಯಾಗಿ 22 ತಿಂಗಳುಗಳ ಕಾಲ ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
ಸ್ವೀಪ್ ಸಮಿತಿಯ ಅಧ್ಯಕ್ಷರಾಗಿದ್ದ ಸಿಇಓ ರವರು ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಜಿಲ್ಲೆಯ ಜನರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಲು ಪ್ರಮುಖ ಕಾರಣರಾಗಿದ್ದನ್ನು ಸ್ಮರಿಸಬಹುದಾಗಿದೆ.
ಪ್ರಭಾರ ಸಿಇಓ ಆಗಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಅಧಿಕಾರವಹಿಸಿಕೊಳ್ಳಲಿದ್ದಾರೆ

Leave a Reply