Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಲೋಕೋಪಯೋಗಿ ಕಛೇರಿ ಮೇಲೆ ಲೋಕಾಯುಕ್ತ ದಾಳಿ: ಕಡತಗಳ ವಶ

ಮಂಡ್ಯ  ಪಿಡಬ್ಲ್ಯೂಡಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ನೇತೃತ್ವದಲ್ಲಿ  ಕಾಮಗಾರಿ ಮಾಡಿರುವ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ತಾರತಮ್ಯ ಮಾಡಲಾಗುತ್ತಿದೆ ಎನ್ನುವ ದೂರಿನ ಮೇರೆಗೆ ಸಂಜಯ ವೃತ್ತ  ಸಮೀಪವಿರುವ ಲೋಕೋಪಯೋಗಿ ಇಲಾಖೆ ಕಚೇರಿ ಮೇಲೆ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

2021ರಲ್ಲಿ ಮಾಡಿರುವ ಕಾಮಗಾರಿಗೆ ಬಿಲ್ ಬಿಡುಗಡೆ ಮಾಡಿಲ್ಲ. ಬದಲಿಗೆ 2024ರಲ್ಲಿ ಮಾಡಿರುವ ಕಾಮಗಾರಿಯ ಹಣವನ್ನು ಬಿಡುಗಡೆ ಮಾಡುವ ಸೀನಿಯಾರಿಟಿ ನಿಯಮ ಉಲ್ಲಂಘನೆ ಮಾಡುವ ಮೂಲಕ ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಹಲವು ಗುತ್ತಿಗೆದಾರರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಸೋಮವಾರ ‌ಮಧ್ಯಾಹ್ನ 3.30ರಿಂದ ರಾತ್ರಿ 8 ಗಂಟೆವರೆಗೂ ಪರಿಶೀಲನೆ ನಡೆಸಿ ಕೆಲವೊಂದು ಮುಖ್ಯವಾದ ಕಡತಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಗುತ್ತಿಗೆದಾರರಿಂದ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. PWD ಚೀಫ್ ಇಂಜಿನಿಯರ್, ಇಇ ಸೇರಿ ಹಲವು ಅಧಿಕಾರಿಗಳ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಲೋಕಾಯುಕ್ತ ಎಸ್ಪಿ ಸುರೇಶ್‌ಬಾಬು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಸುನೀಲ್ ಕುಮಾರ್, ಇನ್ಸ್‌ಪೆಕ್ಟರ್‌ಗಳಾದ ಬ್ಯಾಟರಾಯಗೌಡ, ಜಯರತ್ನಾ, ಸಿಬ್ಬಂ  ದಿಗಳಾದ ಶಂಕರ್, ಶರತ್, ಮಹದೇವ, ಮಹದೇವಸ್ವಾಮಿ, ನವೀನ, ಮನು, ರಾಮಲಿಂಗ ಇದ್ದರು

Leave a Reply

Your email address will not be published. Required fields are marked *

error: Content is protected !!