Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಕುಂದನಹಳ್ಳಿ ಗೇಟ್ ಬಳಿ ಮರಕ್ಕೆ ಬಸ್ ಡಿಕ್ಕಿ ; ಹಲವರಿಗೆ ಗಾಯ 

ಕೆಎಸ್‌ಆರ್ಟಿಸಿ ಬಸ್ ವೊಂದು ಮರಕ್ಕೆ ಡಿಕ್ಕಿಯಾಗಿ ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯವಾಗಿರುವ ಘಟನೆ ಕೆ ಆರ್ ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಅಪಘಾತ ಯಲ್ಲಿ ಮಕ್ಕಳು ಸೇರಿದಂತೆ ಕೈ, ಕಾಲು ಮುರಿತವಾಗಿದ್ದು,  5 ಜನರ ಸ್ಥಿತಿ ಚಿಂತಾಜನಕವಾಗಿದೆ.
ಅಲನಹಳ್ಳಿ ಗ್ರಾಮದಿಂದ ಕೆ ಆರ್ ಪೇಟೆಗೆ ಕೆಎಸ್‌ಆರ್‌ಟಿಸಿ ಬಸ್ ತೆರಳುತ್ತಿತ್ತು.
ಬಸ್ನಲ್ಲಿ ಸುಮಾರು 25ಕ್ಕೂ ಹೆಚ್ಚು ಜನ ಮತ್ತು ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ತಕ್ಷಣವೇ ಕೆಆರ್ ಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!