Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಮಂಡ್ಯದಲ್ಲಿ ಪುಡಿ ರೌಡಿಗಳ ಅಟ್ಟಹಾಸ ; ಸದ್ದು ಮಾಡಿದ ಪೊಲೀಸರ ಗನ್

ಮಂಡ್ಯದಲ್ಲಿ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾದ ಹಿನ್ನೆಲೆಯಲ್ಲಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ
ಸುಭಾಷ್ ಅಲಿಯಾಸ ಸುಬ್ಬು ಮೇಲೆ ಮಂಡ್ಯ ತಾಲೂಕಿನ ಬಿ. ಹೊಸೂರು ಸಮೀಪ ಫೈರಿಂಗ್ ಮಾಡಲಾಗಿದೆ.
ಐದಕ್ಕೂ ಅಧಿಕ ಪ್ರಕರಣಗಳಲ್ಲಿ  ಭಾಗಿಯಾಗಿದ್ದ ಆರೋಪಿ ಕಾಲಿಗೆ ಗುಂಡು ಹೊಡೆದು ಆರೋಪಿ ಸುಭಾಷ್ ನನ್ನು ಬಂಧಿಸಲಾಗಿದೆ.

ಬಿ. ಹೊಸೂರು ಸಮೀಪ ಆತ ತಲೆಮರೆಸಿಕೊಂಡಿರುವ ಮಾಹಿತಿ ಗೊತ್ತಾಗಿ ಬಂಧನಕ್ಕೆ ಪೊಲೀಸರು ತೆರಳಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಮಂಡ್ಯ ಪೂರ್ವ ಠಾಣೆಯ ಪಿಎಸ್‌ಐ ಶೇಷಾದ್ರಿ ಕುಮಾರ್ ಫೈರಿಂಗ್ ಮಾಡಿದ್ದಾರೆ. ಆತ್ಮ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ. ಗಾಯಾಳು ಆರೋಪಿಯನ್ನು ಬಂಧಿಸಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!