Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಮಾ. 6 ಮತ್ತು 7 ರಂದು ನಗರದಾದ್ಯಂತ ನೀರು ಸರಬರಾಜಿನಲ್ಲಿ ವ್ಯತ್ಯಯ

ಮಂಡ್ಯ ನಗರ ನೀರು ಸರಬರಾಜು ವ್ಯವಸ್ಥೆ ನಿರ್ವಹಣೆಯಡಿ ಶ್ರೀರಂಗಪಟ್ಟಣ ಸಮೀಪವಿರುವ ಮೂಲಸ್ಥಾವರಕ್ಕೆ ವಿದ್ಯುತ್ ಸರಬರಾಜು ಮಾಡುವ ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಗೆ  ಸೇರಿದ  ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯ ನಿರ್ವಹಣಾ ಕಾಮಗಾರಿಯನ್ನು  ಮಾ. 6 ರಂದು ಹಮ್ಮಿಕೊಂಡಿರುವುದರಿಂದ ಸದರಿ ದಿನದಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಮಂಡ್ಯ ನಗರಕ್ಕೆ ನೀರು ಸರಬರಾಜು  ಮಾಡುವ ಮೂಲ ಸ್ಥಾವರಕ್ಕೆ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಲಾಗುತ್ತದೆ.

ಆದ್ದರಿಂದ  ಮಂಡ್ಯ ನಗರದ ಸಾರ್ವಜನಿಕರಿಗೆ ಮಾ. 6 ಮತ್ತು 7ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನೀರು ಬಂದ ವೇಳೆ ಶೇಖರಿಸಿಟ್ಟುಕೊಂಡು ಜಲಮಂಡಳಿಯೊಂದಿಗೆ ಸಹಕರಿಸಬೇಕೇಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಂಡ್ಯ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!