Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಲೋಕಾಯುಕ್ತ ಬಲೆಗೆ ಬಿದ್ದ ಮಾಹಿತಿ ಆಯೋಗದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ

ಕಪ್ಪು ಪಟ್ಟಿಯಿಂದ ಆರ್ ಟಿಐ ಕಾರ್ಯಕರ್ತನ ಹೆಸರು ತೆಗೆಯಲು ಹಣದ ಬೇಡಿಕೆ ಇಟ್ಟು, ಹಣ ಪಡೆಯುತ್ತಿದ್ದ ವೇಳೆ ರಾಜ್ಯ ಮಾಹಿತಿ ಆಯೋಗದ ಆಯುಕ್ತರೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆಯು ಕಲ್ಬುರ್ಗಿಯಲ್ಲಿ ನಡೆದಿದೆ.
ಕಲಬುರಗಿ ಪೀಠದ ಆಯುಕ್ತರಾಗಿರುವ ರವೀಂದ್ರ ಗುರುನಾಥ ಡಾಕಪ್ಪ ಲೋಕಾಯುಕ್ತರ ಬಲೆಗೆ ಬಿದ್ದವರಾಗಿದ್ದಾರೆ.

ರವೀಂದ್ರ ಗುರುನಾಥ ಡಾಕಪ್ಪ ಅವರು, ಕಲಬುರಗಿಯ ತಮ್ಮ ಕಚೇರಿಯಲ್ಲಿ ಹಣ ತೆಗೆದುಕೊಳ್ಳುತ್ತಿದ್ದ ವೇಳೆಯಲ್ಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಡಾಕಪ್ಪ, ಬ್ಲಾಕ್ ಲಿಸ್ಟ್ ನಲ್ಲಿರುವ ಆರ್ ಟಿಐ ಕಾರ್ಯಕರ್ತರ ಹೆಸರು ತೆಗೆಯಲು ಆರ್ ಟಿಐ ಕಾರ್ಯಕರ್ತ ಸಾಯಿಬಣ್ಣ ಸಾಸಿ ಬೆನಕನಹಳ್ಳಿಯಿಂದ 3 ಲಕ್ಷ ರೂ, ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

₹1ಲಕ್ಷ ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡಿದ್ದ ಆಯುಕ್ತರು,ಉಳಿದ ಹಣವನ್ನು ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಡಿವೈಎಸ್ ಪಿ ಗೀತಾ ಬೇನಾಳ್ ನೈತೃತ್ವದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು  ಗುರುನಾಥ್ ಅವರನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.

ಕಲ್ಬುರ್ಗಿ ಜಿಲ್ಲಾ ಲೋಕಾಯುಕ್ತ ಎಸ್ಪಿ ಬಿಕೆ. ಉಮೇಶ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಬೆನಾಳ, ಪೊಲೀಸ್ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ಹಾಗೂ ಸಿಬ್ಬಂದಿಯವರಾದ ಮಲ್ಲಿನಾಥ್, ಹನುಮಂತ, ಬಸವರಾಜ್, ಪೈಮೊದಿನ್, ತಂಡದಿಂದ ದಾಳಿ ನಡೆಸಿದರು.

Leave a Reply

Your email address will not be published. Required fields are marked *

error: Content is protected !!