Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಸಿರಿ ಧಾನ್ಯ ನಡಿಗೆ ಕಾರ್ಯಕ್ರಮ – ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ ನಗರದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ನಡಿಗೆ ಕಾರ್ಯಕ್ರಮವನ್ನು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಸಿರಿಧಾನ್ಯ ಅತ್ಯಂತ ಆರೋಗ್ಯಯುತ ಆಹಾರವಾಗಿದ್ದು ರಾಜ್ಯ ಸರ್ಕಾರ ಸಿರಿಧಾನ್ಯ ಬೆಳೆಗೆ ವಿಶೇಷ ಪ್ರೋತ್ಸಾಹ ಧನ ನೀಡುತ್ತಿದೆ ಎಂದರು.
ಬೆಂಗಳೂರಿನಲ್ಲಿ ಮುಂದಿನ ತಿಂಗಳು ಸಿರಿಧಾನ್ಯ ಸಾವಯವ ಅಂತರಾಷ್ಟ್ರೀಯ ಮೇಳ ಆಯೋಜಿಸದ್ದು ಎಲ್ಲರೂ ಪಾಲ್ಗೊಳುವಂತೆ ಸಚಿವರು ಕರೆ ನೀಡಿದರು.

ಸಿರಿಧಾನ್ಯ ನಡಿಗೆಯೂ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಹೊರಟು ಬೆಂಗಳೂರು ಮೈಸೂರು ಮುಖ್ಯ ರಸ್ತೆಯಸಂಜಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ನಂತರ ಮಹಾವೀರ ವೃತ್ತ, ಫ್ಯಾಕ್ಟರಿ ಸರ್ಕಲ್ ಮುಖಾಂತರ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಸ್ಥಳದ ವರಗೂ ನಡೆಯಿತು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಅಶೋಕ್ , ಯುವ ಮುಖಂಡರು ಹಾಗೂ ಕಲಾವಿದರಾದ ಸಚ್ಚಿನ್, ಸಹಾಯಕ ನಿರ್ದೇಶಕಿ ಸುನಿತಾ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!