Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಶ್ರೀ ಜಗದ್ಗುರು ಬಸವೇಶ್ವರ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಜಗದೀಶ್ ಆಯ್ಕೆ

ಶ್ರೀ ಜಗದ್ಗುರು ಬಸವೇಶ್ವರ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಜಗದೀಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಆವರಣದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷ ಕೆ.ಎಸ್. ಷಡಕ್ಷರಿ ಮಾತನಾಡಿ, ಶ್ರೀ ಜಗದ್ಗುರು ಬಸವೇಶ್ವರ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರನ್ನಾಗಿ ಆಡಳಿತ ಮಂಡಳಿ ನಿರ್ದೇಶಕರಾಗಿದ್ದ ಜಗದೀಶ್ ಅವರನ್ನು ಎಲ್ಲ ನಿರ್ದೇಶಕರೂ ಅವಿರೋಧವಾಗಿ ಆಯ್ಕೆ ಮಾಡಿದ್ದೆವೆ. ಮುಂದಿನ ಅವಧಿಯಲ್ಲಿ ಜಗದೀಶ್ ಅವರು ಉತ್ತಮವಾಗಿ ಸಂಘದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದರು.
ಸಂಘದ ಸದಸ್ಯರಿಗೆ ಆರ್ಥಿಕ ಸಹಾಯ ಮಾಡುವುದರ ಜೊತೆಗೆ ಉತ್ತಮವಾಗಿ ವ್ಯವಹಾರ ನಡೆಸುತ್ತಿರುವ ನಮ್ಮ ಪತ್ತಿನ ಸಹಕಾರ ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಸಾಲ ಪಡೆದವರು ನಿಗಧಿತ ಅವಧಿಯೊಳಗೆ ಮರುಪಾವತಿ ಮಾಡುವ ಮೂಲಕ ಇತರರಿಗೂ ಸಾಲ ಸೌಲಭ್ಯ ಸಿಗುವಂತಾಗಬೇಕು. ಜೊತೆಗೆ ಸದಸ್ಯರು ಮತ್ತಷ್ಟು ಸಾಲ ಪಡೆದು ತಮ್ಮ ವ್ಯವಹಾರ, ಉದ್ದಮಿಗಳನ್ನೂ ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ 2025 ನೇ ಸಾಲಿನ ಕ್ಯಾಲೆಂಡರನ್ನೂ ಸಹ ಬಿಡುಗಡೆ ಮಾಡಲಾಗಿದ್ದು, ಸಂಘದ ಪ್ರತಿಯೊಬ್ಬ ಸದಸ್ಯರಿಗೂ ಕ್ಯಾಲೆಂಡರ್‌ಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ನಿರ್ದೇಶಕರುಗಳಾದ ಎಂ.ಎಸ್.ಶಿವಪ್ರಕಾಶ್, ರುದ್ರಸ್ವಾಮಿ, ಬುಳ್ಳಪ್ಪ, ಸಿದ್ದಗಂಗಯ್ಯ, ನಟರಾಜು, ಜಗದೀಶ, ಮಾದಪ್ಪ, ಕುಮಾರ, ಮಮತ ಸ್ವಾಮಿ, ಮಂಜುಮಣಿ, ನಾಗರಾಜಮೂರ್ತಿ, ಶಿವರುದ್ರಪ್ಪ ಸೇರಿದಂತೆ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!