ಮಂಡ್ಯ: ಹರಿಯಾಣ ರಾಜ್ಯದಲ್ಲಿ ಬಿಜೆಪಿ ಗೆಲುವು ಹರ್ಷ ತಂದಿದೆ ಗ್ಯಾರಂಟಿ ಯೋಜನೆ “ಕೈ” ಬಿಟ್ಟಿದೆ ಎಂದು ಜಿಲ್ಲಾ ಬಿಜೆಪಿ ಮುಖಂಡ ಎಚ್.ಆರ್.ಅರವಿಂದ್ ಹೇಳಿದರು. ನಗರದಲ್ಲಿರುವ ಜೆಸಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಹರಿಯಾಣ ರಾಜ್ಯದಲ್ಲಿ ಬಿಜೆಪಿ ಗೆಲುವು ಸಂಭ್ರಮಾಚರಣೆ-ಸಿಹಿ ವಿತರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಭಾರೀ ಕುತೂಹಲ ಕೆರಳಿಸಿ ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತದೆ ಎಂದು ವಿಪಕ್ಷಗಳು ಬೊಬ್ಬೆ ಹಾಕುತ್ತಿದ್ದವು. ಆದರೆ ಬಿಜೆಪಿ ಸತತವಾಗಿ ೩ನೇ ಬಾರಿಗೆ ಅಧಿಕಾರದತ್ತ ದಾಪುಗಾಲು ಇಡುತ್ತಿದೆ. ಜನಾಶೀರ್ವಾದಿಂದ ೩ನೇ ಬಾರಿ ಬಿಜೆಪಿ ಅಧಿಕಾರ ಲಭ್ಯವಾಗಿದೆ ಎನ್ನುವುದು ಸಂತೋಷದ ವಿಷಯವಾಗಿದೆ ಎಂದರು. ಹರಿಯಾಣ ರಾಜ್ಯದಲ್ಲಿ ಒಟ್ಟು ೯೦ ವಿಧಾನಸಾಭಾ ಕ್ಷೇತ್ರಗಳಲ್ಲಿ ಬಿಜೆಪಿ ೪೭ ಕ್ಷೇತ್ರದಲ್ಲಿ ಗೆಲುವು ಸಾಧಿಸಿ, ಬಹುಮತ ಪಡೆದಿದೆ, ಕಾಂಗ್ರಸ್ ೩೭ ಸ್ಥಾನಗಳಲ್ಲಿ ಗೆದ್ದಿದೆ, ಇತರರು ೬ ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ, ಒಟ್ಟಾರೆ ಕಾಂಗ್ರಸ್ ಹೀನಾಯವಾಗಿ ಸೋಲಪ್ಪಿದೆ ಎಂದು ನುಡಿದರು. ಆದರೆ ಜಮ್ಮು-ಕಾಶ್ಮೀರ ರಾಜ್ಯದಲ್ಲಿ ಬಿಜೆಪಿ ಗೆಲ್ಲಬೇಕಿತ್ತು, ರಾಜ್ಯದ ಅಭಿವೃದ್ದಿಗಾಗಿ ೩೭೦ನೇ ಕಾಲಂ ತೆಗೆದು ಸಾಕಷ್ಟು ಯೋಜನೆಗಳನ್ನು ಜಾರಿಮಾಡಿದ್ದರು,
ಅಲ್ಲಿನ ಭಾರತೀಯರ ಮಾನ-ಪ್ರಾಣ, ಉದ್ಯೋಗ ಕ್ಷೇತ್ರಕ್ಕೆ ಹೆಚ್ಚು ಮಹತ್ವ ನೀಡಲಾಗಿತ್ತು,
ಆದರೆ ಒಟ್ಟು ೯೦ ವಿಧಾನಸಭಾ ಕ್ಷೇತ್ರಗಳಲ್ಲಿ ೨೮ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ ಎಂದರು.
ಇನ್ನಾದರೂ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೂಡಾ ಹಗರದಿಂದ ಪಾರಾಗಲು ಜನಗಣತಿ ಬಗ್ಗೆ ಮಾತನಾಡುತ್ತಿದ್ದು, ತಮ್ಮ ತಪ್ಪುಗಳನ್ನು ಮುಚ್ಚಿಸಲು ಜನರ ಮನಸ್ಸನ್ನು ಬೇರೆಕಡೆಗೆ ತಿರುಗಿಸುತ್ತಿದ್ದಾರೆ, ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಿ, ಮುಡಾ ಹಗರಣದ ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದರು.
ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಬಿಜೆಪಿ ಜಯಗಳಿಸಲಿದೆ, ಬಿಜೆಪಿ ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಯೋಜನೆಗಳನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಸಮಗ್ರವಾಗಿ ಜಾರಿ ಮಾಡಲಿ ಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಪಟಾಕಿ ಸಿಡಿಸಿ, ಬಿಜೆಪಿ ಗೆಲುವುಗೆ ಸಂಭ್ರಮಿಸಿದ ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ವಿತರಿಸಿದರು.
ಸಂಭ್ರಮಾಚರಣೆಯಲ್ಲಿ ವಕೀಲ ಕ್ರಾಂತಿ ಮಂಜು, ನಗರಸಭಾ ಮಾಜಿ ಸದಸ್ಯರಾದ ಪ್ರಸನ್ನ, ಚಂದ್ರ, ಮಾಧ್ಯಮ ವಕ್ತರಾ ಸಿ.ಟಿ.ಮಂಜುನಾಥ್, ಸಿದ್ದರಾಜು, ಹೊಸಹಳ್ಳಿ ಶಿವು, ಶಿವಲಿಂಗು, ನಂದೀಶ್, ಆನಂದ್ ಮತ್ತಿತರರಿದ್ದರು.


Leave a Reply