Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಬಿಎಸ್ಎಸ್ ಮೈಕ್ರೋ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆಯಿಂದಾಗಿ ಯುವಜನತೆ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಓದುವ ಸಮಯದಲ್ಲಿ ಇಂತಹ ಹವ್ಯಾಸಗಳಿಂದ ದೂರ ಇರಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಬಿಎಸ್‌ಎಸ್ ಮೈಕ್ರೋ ಫೈನಾನ್ಸ್ ವತಿಯಿಂದ ನಗರದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣಾ ಕರ‍್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಓದುವ ಸಮಯದಲ್ಲಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿಹೋದರೆ ವಿದ್ಯಾಭ್ಯಾಸದ ಗತಿ ಏನು? ಮೊಬೈಲ್‌ನ್ನು ದೂರ ಇಟ್ಟು ಅವಶ್ಯಕತೆ ಇದ್ದಲ್ಲಿ ಮಾತ್ರ ಅದನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ನಮ್ಮ ದೇಶ ಕೃಷಿ ಪ್ರಧಾನವಾದದ್ದು. ಹಿಂದೆಲ್ಲಾ ಕೃಷಿಕರು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದರು. ಮಕ್ಕಳ ವಿಧ್ಯಾಭ್ಯಾಸ, ಬೆಳೆ ಬೆಳೆಯುವ ಸಂದರ್ಭದಲ್ಲಿ ಹಣಕಾಸಿನ ವ್ಯವಸ್ಥೆಗಾಗಿ ಪರದಾಡುತ್ತಿದ್ದರು. ತಮ್ಮಲ್ಲಿರುವ ಚಿನ್ನಾಭರಣಗಳನ್ನು ಗಿರವಿ ಇಟ್ಟು ಅಗತ್ಯತೆಗಳನ್ನು ಪೂರೈಸಿಕೊಳ್ಳಬೇಕಾಗಿತ್ತು.ಆದರೆ ಈಗ ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಸಹಾಯ ಮಾಡುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸ ಅಥವಾ ಬೇರೆಯ ಅಗತ್ಯಕ್ಕೆ ಸುಲಭವಾಗಿ ಸಾಲ ಪಡೆಯಬಹುದಾಗಿದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಮೈಕ್ರೋ ಫೈನಾನ್ಸ್ನವರ ಒತ್ತಡದಿಂದಾಗಿ ಕೆಲವರು ಆತ್ಮಹತ್ಯೆಯಂತಹ ನಿರ್ಧಾರಕ್ಕೆ ಬರುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಸಾಲ ವಾಪಸ್ಸು ಪಡೆಯಲು ಸ್ವಲ್ಪ ಸಮಯಾವಕಾಶವನ್ನೂ ಕೊಡಬೇಕು. ಈ ನಿಟ್ಟಿನಲ್ಲಿ ಸಮಾಜದ ಬಗ್ಗೆ ಕಾಳಜಿ ಇರುವಂತಹ ವ್ಯಕ್ತಿಗಳನ್ನು ಆಯ್ಕೆ ಮಾಡಿ ವಸೂಲಾತಿಗೆ ತೊಡಗಿಸಿಕೊಳ್ಳಬೇಕು. ಸಾಲ ಕೊಡುವಾಗ ಅವರು ವಾಪಸ್ಸು ಕೊಡಲು ಶಕ್ತರೇ, ಅವರ ಆಧಾಯ ಮೂಲದ ಬಗ್ಗೆ ದೃಢಪಡಿಸಿಕೊಳ್ಳಬೇಕು ಎಂದು ಮೈಕ್ರೋ ಫೈನಾನ್ಸ್ನವರಿಗೆ ಸಲಹೆ ನೀಡಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಲವೂ ಸ್ಪರ್ಧೆಯೊಡ್ಡುತ್ತಿವೆ. ಇದಕ್ಕೆ ನಾವೂ ಸಹ ಒಗ್ಗಿಕೊಂಡು ಸ್ಪರ್ಧೆಗೆ ಅಣಿಯಾಗಬೇಕು. ಹಿಂದೆ ಎರಡು ಮೂರನೇ ತರಗತಿ ವ್ಯಾಸಂಗ ಮಾಡಿದ್ದರೆ ಸುಲಭವಾಗಿ ಕರೆದು ಕೆಲಸ ಕೊಡುತ್ತಿದ್ದರು. ಆದರೀಗ ಶೇ. ೯೦ರಷ್ಟು ಅಂಕ ಪಡೆದರೂ ಏನೂ ಮಾಡಲಾಗದಂತಹ ಸ್ಥಿತಿಯಲ್ಲಿz್ದೆÃವೆ. ಸತತ ಅಭ್ಯಾಸ, ಪರಿಶ್ರಮ ಹಾಗೂ ತಾಳ್ಮೆಯಿಂದ ಎಲ್ಲವನ್ನೂ ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಭ್ರೂಣ ಹತ್ಯೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರಿಂದ ಸಾಮಾಜಿಕವಾಗಿ ತೊಂದರೆಯಾಗುತ್ತಿದೆ. ಪೋಷಕರು ತಮ್ಮ ಜವಾಬ್ದಾರಿ ಪೂರೈಸುವ ನಿಟ್ಟಿನಲ್ಲಿ ಬಾಲ್ಯ ವಿವಾಹಕ್ಕೆ ಮುಂದಾಗುತ್ತಾರೆ. ಇದು ಸರಿಯಾದುದಲ್ಲ. ಮಕ್ಕಳಿಗೆ ಕನಿಷ್ಟ ಪದವಿ ಪೂರೈಸಿದ ನಂತರ ಮದುವೆ ಮಾಡುವುದು ಒಳ್ಳೆಯದು. ಜೊತೆಗೆ ಅವರು ಸ್ವಂತ ಕಾಲ ಮೇಲೆ ನಿಂತು ದುಡಿದು ಬದುಕುವಂತಹ ವಾತಾವರಣವನ್ನು ಸೃಷ್ಠಿಸಿಕೊಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ಬಿಎಸ್ಎಸ್ ಮೈಕ್ರೋ ಫೈನಾನ್ಸ್ ನ ಸಿಒಒ ಎಸ್ ಪಂಚಾಕ್ಷರಿ ಭಾಗವಹಿಸಿ ಮಾತನಾಡಿ ದೇಶದ 13 ರಾಜ್ಯಗಳಲ್ಲಿ 870 ಬಿಎಸ್ಎಸ್ ಶಾಖೆಗಳಿವೆ. 8000 ಉದ್ಯೋಗಿಗಳಿದ್ದು, 18 ಲಕ್ಷ ಕುಟುಂಬಗಳು ಯೋಜನೆಯಲ್ಲಿ ಇವೆ ಎಂದರು. ಸಂಸ್ಥೆಯ ಸಿ ಆರ್ ಎಸ್ ಪಂಡ್ ನಿಂದ ಸರ್ಕಾರಿ ಸಾಲ ಕಾಲೇಜುಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಪ್ರತಿ ವರ್ಷ ನೀಡಲಾಗುತ್ತಿದೆ ಎಂದರು.

ಲೀಡ್ ಬ್ಯಾಂಕ್ ಮ್ಯಾನೇಜರ್ ಎನ್.ಅರುಣ್‌ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ಸೌಭಾಗ್ಯ, ಬಿಎಸ್‌ಎಸ್ ಮೈಕ್ರೋ ಫೈನಾನ್ಸ್ ಸಿಇಓ ಎಸ್. ಕುಮಾರ್, ರಾಜ್ಯದ ಮುಖ್ಯಸ್ಥ ಜಗದೀಶ್, ಸಿಎಸ್‌ರ್ ಮ್ಯಾನೇಜರ್ ಪಂಡಿತ್ ಜಿ. ಪಾಟೀಲ್, ಸಹಾಯಕ ವ್ಯವಸ್ಥಾಪಕ ಪ್ರಶಾಂತ್‌ಕುಮಾರ್, ಸಿಒಒ ಎಸ್. ಪಂಚಾಕ್ಷರಿ ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

error: Content is protected !!