Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಮಂಗಲ ಗ್ರಾ.ಪಂಗೆ ಸಿಇಓ ನಂದಿನಿ ಭೇಟಿ,


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು  ಮಂಡ್ಯ ತಾಲ್ಲೂಕಿನ ಮಂಗಲ ಗ್ರಾಮ ಪಂಚಾಯತಿ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇ- ಹಾಜರಾತಿ ಕಡ್ಡಾಯಗೊಳಿಸಲಾಗಿದ್ದು, ಹಾಜರಾತಿ ಪರಿಶೀಲಿಸಿದರು.
ಸಿಬ್ಬಂದಿಗಳ ಹಾಜರಾತಿ, ಚಲನವಲನ ವಹಿ, ನಗದು ನಿರ್ವಹಣಾ ವಹಿ, ನರೇಗಾ ದಾಖಲೆಗಳು, ಕುಡಿಯುವ ನೀರಿನ ವ್ಯವಸ್ಥೆ, ಬೇಸಿಗೆ ಶಿಬಿರ ದ ಪ್ರಗತಿ ಹಾಗೂ  ಸಾರ್ವಜನಿಕ ದೂರಿಗೆ ಗ್ರಾಮ ಪಂಚಾಯತ್ ಕೈಗೊಂಡ  ಕ್ರಮಗಳ ಬಗ್ಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ, ಅಗತ್ಯ ಸಲಹೆಗಳನ್ನು ನೀಡಿದರು.
ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಾರ್ವಜನಿಕರ ಕೆಲಸಗಳನ್ನು ನಿಯಮಾನುಸಾರ ನಿಗದಿತ ಅವಧಿಯೊಳಗೆ ಮಾಡಿಕೊಡುವಂತೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!