Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಮದ್ಯವರ್ಜನ ಕೇಂದ್ರಕ್ಕೆ ದಾಖಲಾಗಿದ್ದ ವ್ಯಕ್ತಿ ಸಾವು

ಕುಡಿತದ ಚಟಕ್ಕೆ ಒಳಗಾಗಿದ್ದ ವ್ಯಕ್ತಿಗೆ
ಮದ್ಯ ಬಿಡಿಸುವ ಸಲುವಾಗಿ ಮದ್ಯವರ್ಜನ ಕೇಂದ್ರದಲ್ಲಿ ದಾಖಲಿಸಿದ್ದ ವ್ಯಕ್ತಿಯೊಬ್ಬ ದಿಢೀರ್ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಸೋಸಲೆ ಗ್ರಾಮದ ಹರೀಶ್  ಎಂಬ ವ್ಯಕ್ತಿಯು ಮೃತನಾಗಿದ್ದಾನೆ.ವ್ಯಕ್ತಿಯು ಕುಡಿತದ ಚಟಕ್ಕೆ ದಾಸನಾಗಿದ್ದರಿಂದ ಹರೀಶನನ್ನು ಕುಟುಂಬದವರು ಮಂಡ್ಯಕ್ಕೆ ಕರೆತಂದು ಬೇವಿನಹಳ್ಳಿಯ ಮದ್ಯವರ್ಜನ ಕೇಂದ್ರಕ್ಕೆ ಜ.11ರಂದು ದಾಖಲಿಸಿದ್ದರು.

ಶುಕ್ರವಾರ ಹರೀಶ್‌ನ ತಂಗಿ ಬಟ್ಟೆ ತೆಗೆದುಕೊಂಡು ಬಂದ ಸಮಯದಲ್ಲೂ ಆತನನ್ನು ಭೇಟಿಯಾಗುವುದಕ್ಕೆ ಕೇಂದ್ರದವರು ಅವಕಾಶ ನೀಡಿಲ್ಲ. ಈಗ ಹರೀಶ್ ಅವರನ್ನು ನೋಡಲಾಗುವುದಿಲ್ಲ ಎಂದು ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ . ಅದಾದ ಅರ್ಧಗಂಟೆಗೆ  ನಂತರ ಹರೀಶ್‌ ಗೆ ತೀರಾ ಹುಷಾ ರಿಲ್ಲದಿರುವ ಕಾರಣ ಆಸ್ಪತ್ರೆಗೆ ದಾಖಲಿಸಿರುವುದಾಗಿ ಕುಟುಂಬಸ್ಥರಿಗೆ ಮಧ್ಯವರ್ಜನ ಕೇಂದ್ರದವರು  ವಿಷಯ ಮುಟ್ಟಿಸಿದ್ದಾರೆ. ಆಸ್ಪತ್ರೆಗೆ ಬರುವಷ್ಟರಲ್ಲಿ ಹರೀಶ್ ಸಾವಿಗೀಡಾಗಿದ್ದನೆಂದು ಹೇಳಲಾಗಿದೆ.

ಕೇಂದ್ರದ ಸಿಬ್ಬಂದಿಯ ದೈಹಿಕ ಕಿರುಕುಳ ಹಾಗೂ ಸರಿಯಾದ ಚಿಕಿತ್ಸೆ ನೀಡದಿರುವುದೇ ತನ್ನ ಗಂಡನ ಸಾವಿಗೆ ಕಾರಣ ಎಂದು ಹರೀಶ್‌ನ ಪತ್ನಿ ಯಶೋದಾ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಶವ ಪರೀಕ್ಷೆ ನಡೆಸಿದ ಬಳಿಕ ಶವವನ್ನು ಕುಟುಂಬದವರಿಗೆ ಒಪ್ಪಿಸಲಾಯಿತು.

ಕುಡಿತದ ಚಟ ಬಿಟ್ಟು ಮೃತ ಹರೀಶ್‌ಗೆ ಯಾವುದೇ ಅನಾರೋಗ್ಯ ಇರಲಿಲ್ಲ. 8 ಸಾವಿರ ಪಡೆದು ಕುಡಿತ ಬಿಡಿಸುತ್ತೇವೆ ಎಂದಿ ದ್ದರು. ಕಳೆದ ವಾರವಷ್ಟೇ ಹರೀಶ್‌ನನ್ನು ಮದ್ಯವರ್ಜನ ಕೇಂದ್ರಕ್ಕೆ ದಾಖಲಿಸಿದ್ದೆವು. ನಿನ್ನವೆರೆಗೂ ಆತನೊಂದಿಗೆ ಮಾತನಾಡುವುದಕ್ಕೂ ಬಿಟ್ಟಿರಲಿಲ್ಲ. ನಿನ್ನೆ ಸಂಜೆ ಕರೆ ಮಾಡಿ ಹುಷಾರಿಲ್ಲ ಆಸ್ಪತ್ರೆಗೆ ಸೇರಿಸಿದ್ದೇವೆ ಎಂದಿದ್ದರು. ಬಂದು ನೋಡಿದ್ರೆ ಅಷ್ಟೊತ್ತಿಗೆ ಮೃತಪಟ್ಟಿದ್ದಾನೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!