
ಸಾರ್ವಜನಿಕರ ಜೊತೆ ಅಧಿಕಾರಿಗಳು ಸೌಜನ್ಯದಿಂದ ವರ್ತಿಸಬೇಕು ಎಂದು ಮಂಡ್ಯ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಲೋಕೇಶಮೂರ್ತಿ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.
ಅವರು ಮಂಡ್ಯ ತಾಲೂಕಿನ ದೊಡ್ಡ ಗರುಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಸಾರ್ವಜನಿಕರಿಂದ ಬರುವ ದೂರು ಅರ್ಜಿಗಳನ್ನು ಅಧಿಕಾರಿಗಳು ತುರ್ತು ಕ್ರಮ ವಹಿಸಿ ಬಗೆಹರಿಸಬೇಕು, ಗ್ರಾಮಗಳಲ್ಲಿ ಕುಡಿಯುವ ನೀರು,ಬೀದಿ ದೀಪ ನಿರ್ವಹಣೆ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಮಲ ರವರು ಸಾರ್ವಜನಿಕರ ಜೊತೆ ಅನುಚಿತವಾಗಿ ನಡೆದುಕೊಳ್ಳುತ್ತಿದ್ದು ಕೂಡಲೇ ಅವರನ್ನು ವರ್ಗಾವಣೆ ಮಾಡುವಂತೆ ಸಾರ್ವಜನಿಕರು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಭೆಯಲ್ಲಿ ತಾಲೂಕು ಯೋಜನಾಧಿಕಾರಿ ವೆಂಕಟರಾವ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರುತಿ, ಕೆಡಿಪಿ ಸಭೆಯ ನಾಮ ನಿರ್ದೇಶನ ಸದಸ್ಯ ರಮೇಶ್ ಮಾಯಪ್ಪನಹಳ್ಳಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು,ಸದಸ್ಯರುಗಳು, ಪಿಡಿಓ ಸೌಭಾಗ್ಯ ಲಕ್ಷ್ಮಿ ಸೇರಿದಂತೆ ಹಲವರು ಭಾಗವಹಿಸಿದ್ದ ರು

Leave a Reply