
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಂಗಳವಾರ (ಡಿಸೆಂಬರ್ 10) ಬೆಳಗಿನ ಜಾವ 2:30ರ ಸುಮಾರಿಗೆ ನಿಧನರಾದರಾಗಿದ್ದಾರೆ . ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.
1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲರಾಗಿ , ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದರು.
ವಯೋಸಹಜ,ಅನಾರೋಗ್ಯ ಮತ್ತು ಇತರ ಕಾರಣಗಳಿಂದಾಗಿ 2023 ರ ಜನವರಿ 7 ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದರು.
ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Leave a Reply