Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಎಚ್. ಕೋಡಿಹಳ್ಳಿ ಯಲ್ಲಿ ಬೆಂಕಿ ಬಿದ್ದು ಹುಲ್ಲಿನ ಮೆದೆ,ಭತ್ತ ಭಸ್ಮ 

ಮಂಡ್ಯ : ಆಕಸ್ಮಿಕವಾಗಿ ಹುಲ್ಲಿನ ಮೆದೆಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಭತ್ತ ಮತ್ತು ಹುಲ್ಲು ಭಸ್ಮವಾಗಿರುವ ಘಟನೆ ತಾಲೂಕಿನ ಎಚ್.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಡೈರಿ ರಾಜು ಎಂಬುವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಹುಲ್ಲಿನ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ೩೦ ಕ್ವಿಂಟಾಲ್ ಭತ್ತಕ್ಕೆ ಬೆಂಕಿ ತಗಲಿ ಸಂಪೂರ್ಣ ಭಸ್ಮವಾಗಿದೆ.
ಸುದ್ಧಿ ತಿಳಿದ ತಕ್ಷಣ  ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.  ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿ ಸೈಯ್ಯದ್ ಭೇಟಿ ನೀಡಿ ಪರಿಶೀಲನೆ ನಡೆಸಿ ನಷ್ಟವುಂಟಾಗಿರುವ ಬಗ್ಗೆ ತಹಸೀಲ್ದಾರ್‌ಗೆ ವರದಿ ನೀಡುವುದಾಗಿ ಭರವಸೆ ನೀಡಿದರು.

Leave a Reply

Your email address will not be published. Required fields are marked *

error: Content is protected !!