Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಗಾಮನಹಳ್ಳಿ ಗ್ರಾಮ ಪಂಚಾಯತಿ ನೂತನ ಸದಸ್ಯರಾಗಿ ಸುಧಾಮಣಿ ಆಯ್ಕೆ

ಶ್ರೀರಂಗಪಟ್ಟಣ ತಾಲೂಕಿನ ಗ್ರಾಮನಹಳ್ಳಿ ಗ್ರಾಮ ಪಂಚಾಯಿತಿಯ ಗಾಮನಹಳ್ಳಿ ಎರಡನೇ ವಾರ್ಡಿನ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಸುಧಾಮಣಿ ಎಸ್ ರವರು ನೂತನ ಸದಸ್ಯರಾಗಿ ಆಯ್ಕೆಯಾದರು.
ಹಿಂದಿನ ಗ್ರಾಮ ಪಂಚಾಯತಿ ಸದಸ್ಯರಾಗಿದ್ದ ಮಲ್ಲಮ್ಮನವರು ನಿಧನ ಹೊಂದಿದ್ದರಿಂದ  ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಸುಧಾಮಣಿಯವರು 353 ಮತಗಳನ್ನು ಪಡೆದು ಜಯಗಳಿಸಿದರೆ, ಪ್ರತಿಸ್ಪರ್ಧಿಯಾಗಿದ್ದ ನಂದಿನಿಯವರು 344 ಮತಗಳನ್ನು ಪಡೆದು ಪರಾಭವಗೊಂಡರು.
ನೂತನವಾಗಿ ಆಯ್ಕೆಯಾದ ಸುಧಾಮಣಿ ಅವರನ್ನು ಗ್ರಾಮಸ್ಥರು ಅಭಿನಂದಿಸಿದರು

Leave a Reply

Your email address will not be published. Required fields are marked *

error: Content is protected !!